ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂಬಾಕು ಸೇವನೆಯಿಂದ ಕೋವಿಡ್ ಅಪಾಯ’-ಆರೋಗ್ಯ ಇಲಾಖೆ

ಎಚ್ಚರಿಕೆ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
Last Updated 19 ಮಾರ್ಚ್ 2021, 17:45 IST
ಅಕ್ಷರ ಗಾತ್ರ

ಬೆಂಗಳೂರು: ‘ತಂಬಾಕು ಸೇವನೆಯಿಂದ ಬಾಯಿಯ ಕ್ಯಾನ್ಸರ್ ಜತೆಗೆ ಕೋವಿಡ್‌ ಅಪಾಯ ಹೆಚ್ಚಲಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ.

ಈ ಸಂಬಂಧ ಇಲಾಖೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದೆ. ‘ಧೂಮಪಾನವು ಶ್ವಾಸಕೋಶದ ಕಾರ್ಯಕ್ಷಮತೆ ಹದಗೆಡಿಸಿ, ರೋಗ ನಿರೋಧಕ ಶಕ್ತಿ ಕುಗ್ಗಿಸುತ್ತದೆ. ಕೊರೊನಾ ಸೋಂಕಿಗೆ ತುತ್ತಾಗುವ ಧೂಮಪಾನಿಗಳು ಹೆಚ್ಚಿನ ತೊಂದರೆ ಅನುಭವಿಸುವುದಲ್ಲದೆ, ಮೃತಪಡುವ ಸಾಧ್ಯತೆ ಹೆಚ್ಚಿರುತ್ತದೆ. ಧೂಮಪಾನ ನಿಲ್ಲಿಸಿದ 20 ನಿಮಿಷಗಳ ನಂತರ ರಕ್ತದೊತ್ತಡವು ಸಾಮಾನ್ಯ ಸ್ಥಿತಿಗೆ ಬರುತ್ತದೆ ಎಂದು ಅಧ್ಯಯನಗಳು ತಿಳಿಸುತ್ತವೆ. ಕೆಲವೇ ದಿನಗಳ ನಂತರ ದೇಹದಲ್ಲಿನ ನಿಕೋಟಿನ್ ಪ್ರಮಾಣ ಕಡಿಮೆಯಾಗುತ್ತದೆ. ಒಂದು ವರ್ಷದ ಬಳಿಕ ಹೃದಯಾಘಾತದ ಅಪಾಯ ಕೂಡ ಕಡಿಮೆಯಾಗುತ್ತದೆ’ ಎಂದು ಇಲಾಖೆ ತಿಳಿಸಿದೆ.

‘ಧೂಮಪಾನದಿಂದ ಹೃದಯಾಘಾತಕ್ಕೆ ಹತ್ತಿರವಾಗುತ್ತಾ ಹೋಗುತ್ತಾರೆ. ಕೋವಿಡ್ ಅಪಾಯವನ್ನು ಕೂಡ ಎದುರಿಸಬೇಕಾಗುತ್ತದೆ. ಹಾಗಾಗಿ, ತಂಬಾಕು ಉತ್ಪನ್ನಗಳ ಸೇವನೆಯನ್ನು ತ್ಯಜಿಸಬೇಕು’ ಎಂದು ಹೇಳಿದೆ.

‌‘ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಇದರಿಂದ ಹಲವರು ಧೂಮಪಾನ ಹಾಗೂ ತಂಬಾಕು ಉತ್ಪನ್ನವನ್ನು ತ್ಯಜಿಸುತ್ತಿದ್ದಾರೆ. ಇನ್ನಷ್ಟು ಜಾಗೃತಿ ಮೂಡಬೇಕಿದೆ’ ಎಂದು ಇಲಾಖೆಯ ಉಪನಿರ್ದೇಶಕ ಡಾ.ಎಂ. ಸೆಲ್ವರಾಜನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT