ಚಿತ್ರದುರ್ಗ: ಮುಂಬರುವ ಚುನಾವಣೆಗಳನ್ನು ಎಲ್ಲರೂ ಒಗ್ಗಟ್ಟಿನಿಂದ ಎದುರಿಸಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.

ಚಿತ್ರದುರ್ಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಹೇಳಿದ ಜವಾಬ್ದಾರಿ ನಿಭಾಯಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ. ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಶಾಸಕ ರಮೇಶ್ ಜಾರಕಿಹೊಳಿ ಅವರು ನನ್ನ ಆತ್ಮೀಯರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಭೇಟಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಾಹಿತಿ ಇಲ್ಲ. ಅವರು ನನಗೆ ಸಂಪರ್ಕಕ್ಕೆ ಸಿಕ್ಕಿಲ್ಲ. ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣವನ್ನು ಗೃಹ ಸಚಿವರು ಗಮನಿಸುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.