ಸೋಮವಾರ, ಜೂನ್ 27, 2022
21 °C
ನೆಲಕ್ಕುರುಳಿದ ವಿದ್ಯುತ್ ಕಂಬಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: 600ಕ್ಕೂ ಹೆಚ್ಚು ಬಾಳೆ ಗಿಡ ಧರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮತ್ತು ಶುಕ್ರವಾರ ಮಧ್ಯಾಹ್ನ ಗುಡುಗು–ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಹಿರಿಯೂರು ತಾಲ್ಲೂಕಿನ ಓಣಿ ಹಟ್ಟಿಯಲ್ಲಿ ದನದ ಕೊಟ್ಟಿಗೆಯೊಂದು ಕುಸಿದು ಹಸುವೊಂದು ಸ್ಥಳದಲ್ಲೇ ಮೃತಪಟ್ಟಿದೆ.

ಹಿರಿಯೂರು ತಾಲ್ಲೂಕಿನ ಕರಿಯಾಲ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ 600ಕ್ಕೂ ಹೆಚ್ಚು ಫಸಲಿಗೆ ಬಂದಿದ್ದ ಬಾಳೆ ಗಿಡಗಳು, ಐದು ತೆಂಗಿನ ಮರಗಳು ಧರೆಗೆ ಉರುಳಿವೆ. ಓಣಿ ಹಟ್ಟಿಯಲ್ಲಿ 5 ಗುಡಿಸಲುಗಳು ಕುಸಿದುಬಿದ್ದಿವೆ. ತಾಲೂಕಿನಲ್ಲಿ 25ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂದು ಪರಿವರ್ತಕ ಹಾನಿಗೆ
ಒಳಗಾಗಿದೆ.

ಚಿತ್ರದುರ್ಗ ನಗರ ಸೇರಿ ತಾಲ್ಲೂಕಿನ ಕೆಲವೆಡೆ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಮೋಡ ಮುಸುಕಿದ ವಾತಾವರಣ ಇತ್ತು. 2.30ಕ್ಕೆ ಆರಂಭವಾದ ಮಳೆ ಕೆಲವೇ ಕ್ಷಣಗಳಲ್ಲಿ ಬಿರುಸು ಪಡೆಯಿತು. ಗುಡುಗು–ಮಿಂಚು ಸಹಿತ ಒಂದು ತಾಸು ಉತ್ತಮ
ಮಳೆಯಾಯಿತು.

ದಾವಣಗೆರೆ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟ, ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ತಾಸಿಗೂ ಹೆಚ್ಚು ಮಳೆ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು