ಪ್ರವಾಸೋದ್ಯಮ ವಲಯಕ್ಕೆ ವಾರಾಂತ್ಯ ಕರ್ಫ್ಯೂ ಬೇಡ
ಬೆಂಗಳೂರು: ‘ಪ್ರಯಾಣ, ಪ್ರವಾಸ, ಆತಿಥ್ಯ ಸೇರಿದಂತೆ ಪ್ರವಾಸೋದ್ಯಮ ವಲಯಕ್ಕೆ ವಾರಾಂತ್ಯದ ಕರ್ಫ್ಯೂ ನಿರ್ಬಂಧಗಳನ್ನು ತೆಗೆದು ಹಾಕಬೇಕು’ ಎಂದು ಕರ್ನಾಟಕ ಟೂರಿಸಂ ಸೊಸೈಟಿ ಒತ್ತಾಯಿಸಿದೆ.
ಈ ಸಂಬಂಧ ಸೊಸೈಟಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.
‘ಈಗ ತಾನೇ ಚೇತರಿಸಿಕೊಳ್ಳುತ್ತಿದ್ದ ಪ್ರವಾಸೋದ್ಯಮ ವಲಯ ಕೋವಿಡ್ ಮೂರನೇ ಅಲೆಯಿಂದಾಗಿ ಮತ್ತೆ ನೆಲಕಚ್ಚಿದೆ. ಪ್ರವಾಸೋದ್ಯಮ ಅವಲಂಬಿಸಿದ್ದ ಬಹುತೇಕರು ಜೀವನ ನಿರ್ವಹಣೆಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಕರ್ನಾಟಕ ಟೂರಿಸಂ ಸೊಸೈಟಿ ಅಧ್ಯಕ್ಷ ಕೆ.ಶ್ಯಾಮರಾಜು ಬೇಸರ ವ್ಯಕ್ತಪಡಿಸಿದ್ದಾರೆ.
‘ಈ ವಲಯದಲ್ಲಿ ಕಾರ್ಯನಿರ್ವಹಿಸುವವರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯಕ್ಕೆ ವಾರಾಂತ್ಯ ಕರ್ಫ್ಯೂ ನಿರ್ಬಂಧಗಳನ್ನು ತೆರವು ಮಾಡಬೇಕು. ರಾತ್ರಿ ಕರ್ಫ್ಯೂ ಸಮಯವನ್ನು ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ನಿಗದಿಪಡಿಸಬೇಕು. ಶೇ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಸೇವೆ ನೀಡಲು ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.