ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರದಲ್ಲಿ ಪ್ರವಾಸೋದ್ಯಮ ಕೇಂದ್ರ ನನೆಗುದಿಗೆ

Last Updated 3 ನವೆಂಬರ್ 2020, 19:06 IST
ಅಕ್ಷರ ಗಾತ್ರ

ಬೆಂಗಳೂರು: ಜಮ್ಮು–ಕಾಶ್ಮೀರದಲ್ಲಿ ಭಾರತದ ಯಾವುದೇ ನಾಗರಿಕ ಜಮೀನು ಖರೀದಿಸಬಹುದೆಂಬ ಕಾನೂನು ಜಾರಿ ಆಗಿರುವುದರಿಂದ ಅಲ್ಲಿ ಕರ್ನಾಟಕದ ಪ್ರವಾಸೋದ್ಯಮ ಕೇಂದ್ರವನ್ನು ಸ್ಥಾಪಿಸಲು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉತ್ಸಾಹದಲ್ಲಿದ್ದರೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.

ಜಮ್ಮ–ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುತ್ತಿದ್ದಂತೆ, ಆ ರಾಜ್ಯದಲ್ಲಿ ಕರ್ನಾಟಕದ ಪ್ರವಾಸೋದ್ಯಮ ಕೇಂದ್ರವನ್ನು ಸ್ಥಾಪಿಸಲು ಪ್ರವಾಸೋದ್ಯಮ ಇಲಾಖೆ ಸಿದ್ಧತೆ ನಡೆಸಿತ್ತು.

ಪ್ರವಾಸೋದ್ಯಮ ಇಲಾಖೆ ಕಳೆದ ವರ್ಷ ಅಲ್ಲಿನ ಲೆಫ್ಟಿನೆಂಟ್‌ ಜನರಲ್‌ ಅವರಿಗೆ ಈ ಸಂಬಂಧ ಪ್ರಸ್ತಾವನೆಯೊಂದನ್ನು ಕಳುಹಿಸಿತ್ತು. ಪ್ರವಾಸೋದ್ಯಮ ಉತ್ತೇಜನ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪಿಸುವ ಸಲುವಾಗಿ ಆ ರಾಜ್ಯಕ್ಕೆ ಭೇಟಿ ನೀಡಲು ತೀರ್ಮಾನಿಸಲಾಗಿತ್ತು. ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ಅದು ಸಾಧ್ಯವಾಗಲಿಲ್ಲ ಎಂದು ಸಚಿವ ರವಿ ಹೇಳಿದರು.

‘ಪ್ರವಾಸೋದ್ಯಮ ಕೇಂದ್ರ ಮತ್ತು ಮ್ಯೂಸಿಯಂ ಸ್ಥಾಪನೆಗೆ ಅಲ್ಲಿನ ವಿಮಾನ ನಿಲ್ದಾಣದ ಬಳಿ ಮೂರು ಎಕರೆ ಭೂಮಿ ಬೇಕಾಗುತ್ತದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದೆ ಈ ಖಾತೆ ವಹಿಸಿಕೊಳ್ಳುವವರು ಮುಂದುವರಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ಸಹಕಾರ ನೀಡುತ್ತೇನೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT