ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ: ಎಸ್‌ಪಿ

ರಾಯಚೂರು: ‘ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು| ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದ್ದಾರೆ.
‘ಇತ್ತೀಚಿನ ದಿನಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುತ್ತಿದೆ. ಜಾತಿ ಅಥವಾ ಧರ್ಮಗಳ ನಡುವೆ
ಗಲಭೆಗಳು ಮತ್ತು ಪ್ರತಿಭಟನೆಗಳು ಆಗುತ್ತಿವೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದ್ದು, ಆದ್ದರಿಂದ ಸಾಮಾಜಿಕ
ಜಾಲತಾಣಗಳ ಮೇಲೆ ನಿರಂತರವಾಗಿ ನಿಗಾ ಇಡಲಾಗಿದೆ’ ಎಂದು ತಿಳಿಸಿದ್ದಾರೆ.
‘ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಜಗಳ ನಡೆಯಬಾರದು ಮತ್ತು ಹಿಂಸಾಚಾರಕ್ಕೆ ಆಸ್ಪದ ಆಗಬಾರದು ಎಂಬ ಕಾರಣಕ್ಕೆ ತೀವ್ರ ನಿಗಾ ವಹಿಸಲಾಗಿದೆ. ಸಂಶಯಾಸ್ಪದ ನಡವಳಿಕೆ ಕಂಡು ಬಂದಲ್ಲಿ, ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ವಾಗುತ್ತದೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.