ಶನಿವಾರ, ಏಪ್ರಿಲ್ 10, 2021
30 °C

ಸಾರಿಗೆ: ತರಬೇತಿ ಅವಧಿ 1 ವರ್ಷಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ತರಬೇತಿ ಅವಧಿಯನ್ನು ಎರಡು ವರ್ಷಗಳಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

2021ರ ಜುಲೈನಿಂದ ಈ ಆದೇಶ ಜಾರಿಗೆ ಬರಲಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಈಶಾನ್ಯ ಸಾರಿಗೆ ನಿಗಮಗಳ ಎಲ್ಲ ನೌಕರರಿಗೆ ಇದು ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಾರಿಗೆ ನಿಗಮಗಳ ನೌಕರರು ಮಂಡಿಸಿದ್ದ ಒಂಬತ್ತು ಬೇಡಿಕೆಗಳ ಈ ಆದೇಶ ಜಾರಿ ಮಾಡುವ ಮೂಲಕ ಪೈಕಿ ಎಂಟು ಬೇಡಿಕೆಗಳನ್ನು ಈಡೇರಿಸಿದಂತಾಗಿದೆ. ನೌಕರರು ಬಹಳ ವರ್ಷಗಳಿಂದ ಒತ್ತಾಯಿಸುತ್ತಿದ್ದ ಅಂತರ ನಿಗಮ ವರ್ಗಾವಣೆಯ ಬೇಡಿಕೆಯನ್ನು ಸರ್ಕಾರ ಇತ್ತೀಚೆಗಷ್ಟೇ ಈಡೇರಿಸಿದೆ ಎಂದು ಅವರು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು