ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್ ಪ್ರಯಾಣ ದರ ಸದ್ಯ ಹೆಚ್ಚಳ ಇಲ್ಲ: ಲಕ್ಷ್ಮಣ ಸವದಿ ಸ್ಪಷ್ಟನೆ

Last Updated 8 ಜೂನ್ 2021, 8:48 IST
ಅಕ್ಷರ ಗಾತ್ರ

ಬೆಂಗಳೂರು: ‘ಸದ್ಯಕ್ಕೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ. ಈಗಾಗಲೇ ಬಡವರು ಕಷ್ಟದಲ್ಲಿ ಓಡಾಡುತಿದ್ದಾರೆ. ಅವರಿಗೆ ಮತ್ತೆ ಕಷ್ಟ ಕೊಡಲು ಹೋಗುವುದಿಲ್ಲ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪ್ರಯಾಣ ದರ ಹೆಚ್ಚಿಸುವಂತೆ ಅಧಿಕಾರಿಗಳು ಪ್ರಸ್ತಾವನೆ ಕೊಟ್ಟಿದ್ದಾರೆ. ಮುಂದೆ ನೋಡೊಣವೆಂದು ಹೇಳಿದ್ದೇನೆ’ ಎಂದರು.

‘ಲಾಕ್‌ಡೌನ್ ಸಡಿಲಗೊಳಿಸಿದರೆ ಹಂತ ಹಂತವಾಗಿ ಬಸ್ ಸಂಚಾರ ಆರಂಭಿಸಲಾಗುವುದು. ಕೊರೊನಾ ನಿಯಮ ಪಾಲನೆ ಬಹಳ ಮುಖ್ಯ. ಹೀಗಾಗಿ, ಪ್ರಯಾಣಿಕರ ಅಂತರ ಕಾಯ್ದುಕೊಂಡು ಬಸ್‌ ಸಂಚಾರ ಆರಂಭಿಸಬೇಕು. ನೌಕರರಿಗೆ ಸ್ಯಾನಿಟೈಸರ್, ಮಾಸ್ಕ್ ಎಲ್ಲವನ್ನು ಸಂಸ್ಥೆಯ ವತಿಯಿಂದಲೇ ನೀಡಲಾಗುವುದು’ ಎಂದರು.

‘ಕೋವಿಡ್‌ ಎರಡು ಡೋಸ್ ಆಗುವವರೆಗೂ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಒತ್ತಡ ಹಾಕುವುದಿಲ್ಲ. ಎರಡನೇ ಡೋಸ್ ತೆಗೆದುಕೊಂಡವರಿಗೆ ರಕ್ಷಣೆ ಕೊಟ್ಟು ಸಾರಿಗೆ ಸೌಲಭ್ಯ ಆರಂಭಿಸಲಾಗುವುದು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT