ಸಾರಿಗೆ ನೌಕರರ ಮುಷ್ಕರ ಅಂತ್ಯಗೊಳಿಸಲು ಯತ್ನ

ಬೆಂಗಳೂರು: ಮುಷ್ಕರದಲ್ಲಿ ಭಾಗಿಯಾಗಿರುವ ಸಾರಿಗೆ ನಿಗಮಗಳ ನೌಕರರನ್ನು ಮನವೊಲಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ಮಧ್ಯಾಹ್ನ ಸಭೆ ನಡೆದಿದೆ.
ಮುಖ್ಯಮಂತ್ರಿ ನೇತೃತ್ವದ ಸಭೆ ಮುಕ್ತಾಯಗೊಂಡಿದೆ. ಅರ್ಧ ಗಂಟೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ
ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ) ಅಧ್ಯಕ್ಷ ಚಂದ್ರಪ್ಪ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ, ಸಾರಿಗೆ ಆಯುಕ್ತ ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.
ಸಾರಿಗೆ ನೌಕರರ ಮನವೊಲಿಕೆ ಅಥವಾ ಖಾಸಗಿ ಬಸ್ ಗಳನ್ನು ಓಡಿಸುವ ಕುರಿತು ಸಭೆಯಲ್ಲಿ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.
ಇದನ್ನೂ ಓದಿ: ಮುಷ್ಕರಕ್ಕೆ ಕರೆ ನೀಡಿದವರ ಜತೆ ಚರ್ಚಿಸುವಂತೆ ಕಾರ್ಮಿಕ ಮುಖಂಡರ ಸಲಹೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.