ಮಂಗಳವಾರ, ಜೂನ್ 15, 2021
21 °C

ಕವಿ ಸಿದ್ದಲಿಂಗಯ್ಯಗೆ ಚಿಕಿತ್ಸೆ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಸೋಂಕಿತರಾಗಿರುವ ಕವಿ ಸಿದ್ದಲಿಂಗಯ್ಯ ಅವರಿಗೆ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಸಿ) ಚಿಕಿತ್ಸೆ ಮುಂದುವರೆದಿದೆ.

ನಾಲ್ಕು ದಿನಗಳ ಹಿಂದೆ ಸೋಂಕಿತರಾಗಿದ್ದ ಅವರಿಗೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಅವರ ಪತ್ನಿ ಹಾಗೂ ಕಾರು ಚಾಲಕ ಕೂಡ ಕೋವಿಡ್ ಪೀಡಿತರಾಗಿದ್ದಾರೆ. ಪತ್ನಿಗೆ ಚಾಮರಾಜಪೇಟೆಯಲ್ಲಿರುವ ರಂಗದೊರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಕಾರು ಚಾಲಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

‘ಕೋವಿಡ್‌ ನ್ಯೂಮೋನಿಯಾದಿಂದ ಬಳಲುತ್ತಿರುವ ಸಿದ್ದಲಿಂಗಯ್ಯ ಅವರಿಗೆ ಕೃತಕ ಉಸಿರಾಟದ ಸಂಪರ್ಕ ಒದಗಿಸಲಾಗಿದೆ. ಅವರು ತೀವ್ರವಾಗಿ ಅಸ್ವಸ್ಥರಾಗಿದ್ದು, ತಜ್ಞ ವೈದ್ಯರ ತಂಡವು ಅವರ ಆರೋಗ್ಯದ ಬಗ್ಗೆ ನಿರಂತರ ಮೇಲ್ವಿಚಾರಣೆ ಮಾಡುತ್ತಿದೆ’ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು