ಬುಧವಾರ, ಮೇ 18, 2022
24 °C

21ರಂದು ಪುನೀತ್‌ ರಾಜ್‌ಕುಮಾರ್‌ಗೆ ರಂಗನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಹಿತಿ ಮತ್ತು ಕಲಾವಿದರ ವೇದಿಕೆಯು ರಂಗ ವಿಜಯ ಸಂಘಟನೆಯ ಸಹಯೋಗದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ರಂಗನಮನ ಸಲ್ಲಿಸಲು ನಿರ್ಧರಿಸಿದೆ. ಇದಕ್ಕಾಗಿ ‘ನಿನ್ನಂಥೋರ್‌ ಯಾರೂ ಇಲ್ವಲ್ಲೋ ಈ ಲೋಕದಾ ಮ್ಯಾಲೆ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.

‘ಇದೇ 21ರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಂಪು ಸಂಗೀತ ಸಂಸ್ಥೆಯವರು ರಂಗ ಗೀತೆ ಹಾಗೂ ನೆನಪಿನ ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ನಟ ರಾಘವೇಂದ್ರ ರಾಜ್‌ಕುಮಾರ್‌ ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

‘ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಬರಗೂರು ರಾಮಚಂದ್ರಪ್ಪ, ಎಚ್.ಎಸ್‌.ಶಿವಪ್ರಕಾಶ್‌, ಬಿ.ಜಯಶ್ರೀ, ನಾಗತಿಹಳ್ಳಿ ಚಂದ್ರಶೇಖರ್‌, ಪಿ.ಶೇಷಾದ್ರಿ, ಗಿರಿಜಾ ಲೋಕೇಶ್‌, ಪ್ರಕಾಶ್‌ ರಾಜ್‌, ಅರುಂಧತಿ ನಾಗ್‌, ಪ್ರಕಾಶ್‌ ಬೆಳವಾಡಿ, ದತ್ತಣ್ಣ, ಉಮಾಶ್ರೀ, ಬಿ.ಸುರೇಶ್‌, ಜಯರಾಮ್‌ ರಾಯಪುರ, ಸುಧಾ ಬೆಳವಾಡಿ, ಎಂ.ಎಸ್‌.ಮೂರ್ತಿ ಹಾಗೂ ಟಿ.ಎಸ್‌.ನಾಗಾಭರಣ ‌ನುಡಿ ನಮನ ಸಲ್ಲಿಸಲಿದ್ದಾರೆ’ ಎಂದೂ ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು