ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿವೇಣಿ ಸಂಗಮದಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶ

Last Updated 6 ಜುಲೈ 2021, 14:38 IST
ಅಕ್ಷರ ಗಾತ್ರ

ನಾಪೋಕ್ಲು: ತ್ರಿವೇಣಿ ಸಂಗಮದಲ್ಲಿ ಕೊಡಗಿನ ಜನರಿಗೆ ಅಸ್ಥಿ ವಿಸರ್ಜನೆಗೆ ಅವಕಾಶ ನೀಡಿದ್ದರಿಂದ ಸಾರ್ವಜನಿಕರು ಪುಣ್ಯಕ್ಷೇತ್ರ ಭಾಗಮಂಡಲಕ್ಕೆ ತೆರಳಿ ವಿವಿಧ ಧಾರ್ಮಿಕ ಕ್ರಿಯೆಗಳನ್ನು ನೆರವೇರಿಸಿದರು.

ಕಳೆದ ಎರಡು ತಿಂಗಳಿನಿಂದ ಕೋವಿಡ್ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿತ್ತು. ಮಂಗಳವಾರ ಹಲವು ಮಂದಿ ತ್ರಿವೇಣಿ ಸಂಗಮಕ್ಕೆ ಆಗಮಿಸಿ ಅಸ್ಥಿ ವಿಸರ್ಜಿಸಿದರು.

ಅಸ್ಥಿ ವಿಸರ್ಜನೆ ಕೊಡವ ಸಂಸ್ಕೃತಿ, ಸಂಪ್ರದಾಯದ ಒಂದು ಭಾಗವಾಗಿದ್ದು, ವ್ಯಕ್ತಿ ಮೃತನಾದ 16 ದಿನಗಳಲ್ಲಿ ಅಸ್ಥಿ ವಿಸರ್ಜನೆ ಮಾಡಬೇಕು. ತ್ರಿವೇಣಿ ಸಂಗಮದಲ್ಲಿ ವಿಷ್ಣು ಸಾನ್ನಿಧ್ಯವಿರುವ ಕಾರಣ ಆ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವಿದೆ. ಕೊರೊನಾ ಕಾರಣ ಹಾಗೂ ಸ್ವಾಭಾವಿಕವಾಗಿ ಹೆಚ್ಚಿನ ಜನ ಕಳೆದೆರಡು ತಿಂಗಳಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಜನ ಸೇರಿದಂತೆ ಬೆಂಗಳೂರು, ಮೈಸೂರು ಹಾಗೂ ಹೊರ ಊರಿನಲ್ಲಿ ನೆಲೆಸಿರುವ ಜನರೂ ಅಸ್ಥಿ ವಿಸರ್ಜನೆಗೆ ಭಾಗಮಂಡಲಕ್ಕೆ ಆಗಮಿಸುತ್ತಾರೆ. ಅಸ್ಥಿ ವಿಸರ್ಜನೆಗೆ ಅವಕಾಶ ಕೋರಿ ಹಲವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು.

ಸೋಮವಾರದಿಂದ ನಿರ್ಬಂಧ ಸಡಿಲಿಸಿ ತ್ರಿವೇಣಿ ಸಂಗಮದಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶ ಕಲ್ಪಿಸಿದ್ದರಿಂದ ಜನರು ತ್ರಿವೇಣಿ ಸಂಗಮದತ್ತ ತೆರಳಿ ವಿಧಿವಿಧಾನ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT