ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಿಂಗ್ ಮೊತ್ತ ಮೇಲಿನ ಜಿಎಸ್‌ಟಿ ರದ್ದು ಆದೇಶಕ್ಕೆ ತಡೆ

Last Updated 12 ಆಗಸ್ಟ್ 2021, 18:00 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಟರ್ಫ್‌ ಕ್ಲಬ್ ಮತ್ತು ಮೈಸೂರು ರೇಸ್‌ ಕ್ಲಬ್‌ ಲಿಮಿಟೆಡ್‌ನಲ್ಲಿ ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ತೆರಿಗೆ ವಿಧಿಸುವ ಜಿಎಸ್‌ಟಿ ನಿಯಮಗಳನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮುರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ಸ್ಟಾಕ್ ಬ್ರೋಕರ್‌ ಅಥವಾ ಟ್ರಾವೆಲ್‌ ಏಜೆಂಟ್‌ಗಳ ರೀತಿಯಲ್ಲಿ ಈ ಎರಡು ರೇಸ್ ಕ್ಲಬ್‌ಗಳು ಕೇವಲ ಕಮಿಷನ್ ಪಡೆದು ಕಾರ್ಯ ನಿರ್ವಹಿಸುತ್ತಿವೆ. ಈ ಕಾರಣದಿಂದ ಈ ಕ್ಲಬ್‌ಗಳು ಸಂಪೂರ್ಣ ಬೆಟ್ಟಿಂಗ್ ಮೊತ್ತದ ಮೇಲೆ ಜಿಎಸ್‌ಟಿ ಪಾವತಿಸಲು ಆಗುವುದಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತ್ತು. ಕೇಂದ್ರ ಸರಕು ಮತ್ತು ಸೇವೆಗಳ 2017ರ ನಿಯಮ 31ಎ(3) ಹಾಗೂ ಕರ್ನಾಟಕ ಸರಕು ಮತ್ತು ಸೇವೆ ತೆರಿಗೆ ನಿಯಮ 31ಎ ಅನ್ನು ಈ ಎರಡು ರೇಸ್ ಕ್ಲಬ್‌ಗಳಿಗೆ ಅನ್ವಯ ಆಗುವಂತೆ ರದ್ದುಪಡಿಸಿತ್ತು.

‘ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 15ರಲ್ಲಿ ತೆರಿಗೆ ಮೌಲ್ಯಮಾಪನ ಮಾಡಲು ಅವಕಾಶ ಇದೆ. ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವೂ ಈ ನಿಯಮವನ್ನು ಎತ್ತಿ ಹಿಡಿದಿದೆ’ ಎಂದು ಮೇಲ್ಮನವಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವರಿಸಿವೆ. ಮುಂದಿನ ವಿಚಾರಣೆಯನ್ನು ಪೀಠ ಅಕ್ಟೋಬರ್ 7ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT