ಗುರುವಾರ , ಮಾರ್ಚ್ 30, 2023
21 °C

ಕಲಬುರಗಿ: ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ- 20 ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಜ‌ನ ಹೋರಾಟಗಾರರನ್ನು ಪೊಲೀಸರು  ಬೆಳಿಗ್ಗೆ ಬಂಧಿಸಿದರು.

ರಾಜ್ಯೋತ್ಸವದ ಪ್ರಯುಕ್ತ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಕೋರ್ಟ್ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಭವನದಿಂದ  ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಮೆರವಣಿಗೆ ಮೂಲಕ ಪಟೇಲ್‌ ವೃತ್ತದ ಬಳಿ ಧ್ವಜಾರೋಹಣ ಮಾಡಲು ಹೊರಟಾಗ ಪೊಲೀಸರು ತಡೆದರು.

ಪ್ರತ್ಯೇಕ ರಾಜ್ಯ ಆಗಲೇಬೇಕು ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಮುಂದಾದರು. ಈ ವೇಳೆ ಸ್ಟೇಶನ್ ಬಜಾರ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಸಿದ್ದರಾಮೇಶ ಗಡೇದ ಅವರು ಮುಖಂಡ ಎಂ.ಎಸ್. ಪಾಟೀಲ ನರಿಬೋಳ ಸೇರಿದಂತೆ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು