ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನಿಶ್ ಮಹೇಶ್ವರಿ ವಿರುದ್ಧದ ನೋಟಿಸ್ ರದ್ದು

Last Updated 23 ಜುಲೈ 2021, 19:39 IST
ಅಕ್ಷರ ಗಾತ್ರ

ಬೆಂಗಳೂರು: ವೃದ್ಧನ ಮೇಲಿನ ಹಲ್ಲೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆದ ಪ್ರಕರಣದಲ್ಲಿ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನಿಶ್ ಮಹೇಶ್ವರಿಗೆ ಉತ್ತರ ಪ್ರದೇಶ ಪೊಲೀಸರು ನೀಡಿದ್ದ ನೋಟಿಸ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

‘ಅರ್ಜಿದಾರರ ಮನಿಶ್ ಅವರನ್ನು ಎಫ್‌ಐಆರ್‌ನಲ್ಲಿ ಆರೋಪಿಯಾಗಿ ಮಾಡಿಲ್ಲ. ವಿಡಿಯೊ ಸಂವಾದದ ಮೂಲಕ ಅರ್ಜಿದಾರರ ವಿಚಾರಣೆ ನಡೆಸಲು ಸಾಧ್ಯವಿದ್ದರೂ ಸಿಆರ್‌ಪಿಸಿ ಸೆಕ್ಷನ್ 160 ಅಡಿಯಲ್ಲಿ ನೋಟಿಸ್ ನೀಡಲಾಗಿದೆ’ ಎಂದು ನ್ಯಾಯಮೂರ್ತಿ ಜಿ. ನಾಗೇಂದ್ರ ಅವರಿದ್ದ ಪೀಠ ಹೇಳಿದೆ.

‘ಮುಸ್ಲಿಂ ವ್ಯಕ್ತಿಯೊಬ್ಬರಿಗೆ ‘ಜೈ ಶ್ರೀರಾಮ್’ ಮತ್ತು ‘ವಂದೇ ಮಾತರಂ’ ಹೇಳುವಂತೆ ಒತ್ತಾಯಿಸುತ್ತಿರುವುದು ವಿಡಿಯೊದಲ್ಲಿದೆ. ಇದು ವೈಯಕ್ತಿಕ ದಾಳಿ ಎಂದು ತಿಳಿಸಿದ್ದರೂ ತಪ್ಪು ಮಾಹಿತಿ ಇರುವ ವಿಡಿಯೊ ಹರಡುವುದನ್ನು ತಡೆಯಲು ಟ್ವಿಟರ್ ಕ್ರಮ ಕೈಗೊಂಡಿಲ್ಲ’ ಎಂಬುದು ಪೊಲೀಸರ ಆರೋಪ.

‘ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಹಾಜರಾಗುವುದಾಗಿ ತಿಳಿಸಿದ್ದರೂ ಖುದ್ದು ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಕರೆದು ಬಂಧಿಸುವ ಸಾಧ್ಯತೆ ಇದೆ’ ಎಂದು ಮನಿಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಟ್ವಿಟರ್ ಇಂಡಿಯಾ ಮತ್ತು ಟ್ವಿಟರ್ ಇಂಕ್ ಎರಡೂ ವಿಭಿನ್ನ ಘಟಕಗಳು. ಟ್ವಿಟರ್‌ನಲ್ಲಿ ಹರಡುವ ಸಂದೇಶಗಳು ಇವರ ನಿಯಂತ್ರಣಕ್ಕೆ ಸಿಗುವುದಿಲ್ಲ. ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಯನ್ನು ಉತ್ತರ ಪ್ರದೇಶ ಪೊಲೀಸರು ಸಲ್ಲಿಸಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT