ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತನ ಹತ್ಯೆ: ಮತ್ತಿಬ್ಬರು ಪೊಲೀಸರ ವಶಕ್ಕೆ

Last Updated 22 ಫೆಬ್ರುವರಿ 2022, 6:50 IST
ಅಕ್ಷರ ಗಾತ್ರ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೂವರು ಆರೋಪಿಗಳನ್ನು ನಿನ್ನೆಯೇ ಬಂಧಿಸಲಾಗಿತ್ತು. ಹಾಗಾಗಿ, ಪ್ರಕರಣದಲ್ಲಿ ಈವರೆಗೆ 5 ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಶಿವಮೊಗ್ಗ ನಗರದ ಭಾರತಿನಗರದಲ್ಲಿ ಭಾನುವಾರ ರಾತ್ರಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಕೊಂದಿತ್ತು. ಕೊಲೆ ಪ್ರಕರಣದಲ್ಲಿ 7 ಮಂದಿಯ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.

‘ಬಂಧಿತರ ರಾಜಕೀಯ ಮತ್ತು ಸಾಮಾಜಿಕ ಸಂಪರ್ಕಗಳನ್ನು ಪತ್ತೆ ಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ’ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ನಿನ್ನೆ ಏರ್ಪಟ್ಟಿದ್ದ ಉದ್ವಿಗ್ನ ವಾತಾವರಣವನ್ನು ಮನಗಂಡು ಶಿವಮೊಗ್ಗ ನಗರದ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೊಲೆಗಡುಕರ ಪತ್ತೆಗೆ ಪೊಲೀಸರ ಮೂರು ತಂಡಗಳನ್ನು ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT