ಬುಧವಾರ, ಡಿಸೆಂಬರ್ 8, 2021
28 °C

ಡ್ರಗ್ಸ್‌ ದಂಧೆ: ಮತ್ತೆ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡ್ರಗ್ಸ್‌– ಪ್ರಾತಿನಿಧಿಕ ಚಿತ್ರ

ಮಡಿಕೇರಿ: ಡಗ್ಸ್‌ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರಿನ ಬಾಣಸವಾಡಿಯ ಫೈಸಲ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಸಾರಾ (ಸಾರಾಬಾನು) ಬಂಧಿತ ಆರೋಪಿಗಳು.

ಆಗಸ್ಟ್‌ 28ರಂದು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಯ ನೇತೃತ್ವದಲ್ಲಿ ನಡೆದಿದದದ ಕಾರ್ಯಾಚರಣೆಯಲ್ಲಿ ಜಿಲ್ಲೆಯ ಅಯ್ಯಂಗೇರಿ ಗ್ರಾಮದ ಮಜೀದ್‌ (35), ಅದೇ ಗ್ರಾಮದ ಶಿಯಾಬುದ್ದೀನ್‌ (32) ಹಾಗೂ ಬೆಂಗಳೂರು ಶಿವಾಜಿನಗರದ ಮುಜಾಮಿಲ್‌ (31) ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಅಂದು ಮತ್ತೊಂದು ಕಾರಿನಲ್ಲಿದ್ದ ಐವರು ಆರೋಪಿಗಳು ತಪ್ಪಿಸಿಕೊಂಡಿದ್ದರು. ಅದರಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಸಂಖ್ಯೆ 5ಕ್ಕೇರಿದೆ ಎಂದು ‍ಪೊಲೀಸ್‌ ಮೂಲಗಳು ತಿಳಿಸಿವೆ. ಕಳೆದ ತಿಂಗಳು ನಡೆದಿದ್ದ ಕಾರ್ಯಾಚರಣೆಯಲ್ಲಿ ಬಂಧಿತರಿಂದ 300 ಗ್ರಾಂನಷ್ಟು ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆಯಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು