ಭಾನುವಾರ, ಮಾರ್ಚ್ 7, 2021
32 °C

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್‌ ಹೈಕಮಾಂಡ್‌ ಆದೇಶ ಹೊರಡಿಸಿದೆ.

ಈ ಕುರಿತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐವರು ಕಾರ್ಯಾಧ್ಯಕ್ಷರು

ಕೆಪಿಸಿಸಿಗೆ ದಿನೇಶ್‌ ಗುಂಡೂರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದಾಗ ಈಶ್ವರ ಖಂಡ್ರೆ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಬಳಿಕ ಎಸ್.ಆರ್. ಪಾಟೀಲರಿಗೂ ಈ ಸ್ಥಾನ ನೀಡಲಾಗಿತ್ತು. ಲೋಕಸಭೆ ಚುನಾವಣೆ ಸೋಲಿನ ಬಳಿಕ ಪಾಟೀಲರು ರಾಜೀನಾಮೆ ನೀಡಿದ್ದರು. ಈಗ ಕಾರ್ಯಾಧ್ಯಕ್ಷರ ಸಂಖ್ಯೆಯನ್ನು ಐದಕ್ಕೆ ಏರಿಸಲಾಗಿದೆ.

ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಪಕ್ಷದ ಬಲವರ್ಧನೆ ಲೆಕ್ಕಾಚಾರ
ಸದ್ಯದಲ್ಲೇ ಬಿಬಿಎಂಪಿ ಚುನಾವಣೆ ಇರುವ ಹಿನ್ನಲೆಯಲ್ಲಿ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಿರಿಯ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಹಾಗೂ ಕೆಪಿಸಿಸಿ ವಕ್ತಾರ ಆರ್.ಧ್ರುವನಾರಾಯಣ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್‌ ನೇಮಕ ಮಾಡಿದೆ ಎಂದು ಹೇಳಲಾಗುತ್ತಿದೆ.


ಕಾಂಗ್ರೆಸ್‌ ಹೈಕಮಾಂಡ್‌ ಹೊರಡಿಸಿರುವ ಆದೇಶ ಪ್ರತಿ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು