ಬಾಗಲಕೋಟೆ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕಲ್ಲು ಕ್ವಾರಿಗಳು ಹಾಗೂ ಗಣಿ ಮಾಲೀಕರೊಂದಿಗೆ ಮಂಗಳವಾರ ಸಭೆನಡೆಸಿದಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ, ಅಲ್ಲಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದರು.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ’ಕಲ್ಲು ಕ್ವಾರಿಗಳ ಮಾಲೀಕರಿಗೆ ಕಿರುಕುಳ ನೀಡಿದ ಹಾಗೂ ವ್ಯಾಪಕ ಭ್ರಷ್ಟಾಚಾರದ ಆರೋಪದ ಮೇಲೆ ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಭೂ ವಿಜ್ಞಾನಿ ಫಯಾಜ್ ಅಹಮದ್ ಶೇಖ್ ಹಾಗೂ ಈ ಹಿಂದೆ ಇಲ್ಲಿ ಕೆಲಸ ಮಾಡಿ ಸದ್ಯ ಚಿತ್ರದುರ್ಗಕ್ಕೆ ವರ್ಗಾವಣೆಗೊಂಡಿರುವ ಹಿರಿಯ ಭೂ ವಿಜ್ಞಾನಿ ಬಿ.ಎಂ.ಲಿಂಗರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಸಚಿವರು ಕರೆದಿದ್ದ ಸಭೆಗೆ ಮಾಧ್ಯಮದವರಿಗೆ ಪ್ರವೇಶವಿರಲಿಲ್ಲ. ಸಭೆಯಲ್ಲಿ ಪಾಲ್ಗೊಂಡಿದ್ದ ಫಯಾಜ್ ಅಹಮದ್ ಅರ್ಧದಲ್ಲಿಯೇ ಹೊರ ನಡೆದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕರೆ ಮಾಡಿದರೆ ಅವರು ಸ್ವೀಕರಿಸಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.