ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ವರ್ಗ: ಎರಡು ವರ್ಷ ಅವಧಿ ನಿಗದಿ

ಕರ್ನಾಟಕ ಶಾಂತಿ, ಸುರಕ್ಷತೆಯ ರಾಜ್ಯ: ಬಿಎಸ್‌ವೈ
Last Updated 12 ಫೆಬ್ರುವರಿ 2021, 19:03 IST
ಅಕ್ಷರ ಗಾತ್ರ

ಬೆಂಗಳೂರು: ‘ಒಂದು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳನ್ನು ಎರಡು ವರ್ಷ ಪೂರ್ಣಗೊಳ್ಳುವವರೆಗೆ ವರ್ಗಾವಣೆ ಮಾಡದಿರುವ ನಿಯಮವನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾ ಗಿದೆ’ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

‘ಈಗ ಪೊಲೀಸ್‌ ಅಧಿಕಾರಿಗಳನ್ನು ವರ್ಷದೊಳಗೇ ವರ್ಗಾವಣೆ ಮಾಡಲಾಗುತ್ತಿದೆ. ಇದರಿಂದ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಪೊಲೀಸ್‌ ಸಿಬ್ಬಂದಿ ಮಂಡಳಿ ಎರಡು ವರ್ಷಗಳ ಅವಧಿ ನಿಗದಿ ಮಾಡಿತ್ತು. ಆದರೆ, ಹಿಂದಿನ ಸರ್ಕಾರ ಅದನ್ನು ಪರಿಷ್ಕರಿಸಿ ಒಂದು ವರ್ಷದಲ್ಲೇ ವರ್ಗಾವಣೆ ಮಾಡುವ ನಿಯಮ ಜಾರಿಗೆ ತಂದಿತ್ತು’ ಎಂದು ಅವರು ಹೇಳಿದರು.

ಆನ್‌ಲೈನ್‌ ಗೇಮಿಂಗ್‌ ಮತ್ತು ಸ್ಕಿಲ್‌ ಗೇಮಿಂಗ್‌ ಮೇಲೆ ನಿಯಂತ್ರಣ ವಿಧಿಸಲು ಕಾನೂನು ರೂಪಿಸಲಾಗು
ವುದು. ಮುಂದಿನ ಅಧಿವೇಶನದಲ್ಲಿ ಈಸಂಬಂಧ ಮಸೂದೆ ಮಂಡಿಸಲಾಗುವು ದು ಎಂದು ಬೊಮ್ಮಾಯಿ ತಿಳಿಸಿದರು.

ಶಾಂತಿಯುತ ರಾಜ್ಯ: ಕರ್ನಾಟಕ ಅತ್ಯಂತ ಶಾಂತಿಯುತ ರಾಜ್ಯ. ಕಳೆದ ಒಂದು ವರ್ಷದಲ್ಲಿ ರಾಷ್ಟ್ರದ ಹಲವು ಕಡೆಗಳಲ್ಲಿ ಸಮಸ್ಯೆಗಳಿದ್ದರೂ ರಾಜ್ಯದಲ್ಲಿ ಮಾತ್ರ ಕಾನೂನು ಸುವ್ಯವಸ್ಥೆ ಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯಲ್ಲಿ ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕ ಉತ್ತಮ ಸ್ಥಾನ ಪಡೆದಿದೆ. ಅಲ್ಲದೆ, ಅಪರಾಧಗಳ ಅಂಕಿ– ಅಂಶಗಳೂ ಸಹ ರಾಜ್ಯದಲ್ಲಿ ಉತ್ತಮ ವಾತಾವರಣ ಇರುವುದನ್ನು ಸಾರುತ್ತವೆ. ಪೊಲೀಸ್‌ ಇಲಾಖೆಯ ಕಠಿಣ ಪರಿಶ್ರಮದಿಂದ ಗಂಭೀರ ಸ್ವರೂಪದ ಅಪರಾಧಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಸೈಬರ್‌ ಅಪರಾಧಗಳು ಪೊಲೀಸ್‌ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿ ಸುವ ಸಾಧ್ಯತೆ ಇದೆ. ಈ ಸವಾಲನ್ನು ಎದುರಿಸಲು ಬೆಂಗಳೂರು ನಗರದಲ್ಲಿ ಹೊಸದಾಗಿ 8 ಸಿ.ಇ.ಎನ್‌ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸುವ ಮೂಲಕ ಸೈಬರ್‌ ಅಪರಾಧಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಪೊಲೀಸ್‌ ಗೃಹ–2020 ಯೋಜನೆ ಗೆ ₹2,272.37 ಕೋಟಿ ಅನುದಾನ ನೀಡಲಾಗಿದ್ದು, ಕಾಮಗಾರಿಗಳು ನಡೆ ದಿವೆ. ಈವರೆಗೂ 10,134 ವಸತಿ ಗೃಹ ಗಳನ್ನು ನಿರ್ಮಾಣ ಮಾಡಲಾಗಿದೆ. ಎಲ್ಲ ಕಾಮಗಾರಿಗಳು ಈ ವರ್ಷವೇ ಪೂರ್ಣಗೊಳ್ಳಲಿವೆ ಎಂದು ಮುಖ್ಯಮಂತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT