ಬುಧವಾರ, ಡಿಸೆಂಬರ್ 8, 2021
21 °C

ಕಾನೂನು ವಿ.ವಿ ಪರೀಕ್ಷೆಗೆ ಅಸ್ತು; ಏಕಸದಸ್ಯ ನ್ಯಾಯಪೀಠದ ತಡೆಯಾಜ್ಞೆ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಐದು ಮತ್ತು ಮೂರು ವರ್ಷದ ಕಾನೂನು ಪದವಿಯ ಸೆಮಿಸ್ಟರ್‌ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಕ್ಕೆ ಹಸಿರು ನಿಶಾನೆ ತೋರಿಸಿರುವ ಹೈಕೋರ್ಟ್‌, ಬುಧವಾರ ಈ ಕುರಿತು ಮಧ್ಯಂತರ ಆದೇಶ ಹೊರಡಿಸಿದೆ.

ಪರೀಕ್ಷೆಗಳಿಗೆ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಕೋರ್ಟ್‌ ಅನುಮತಿ ಇಲ್ಲದೇ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು’ ಎಂದು ನಿರ್ದೇಶಿಸಿದೆ.

ವಿದ್ಯಾರ್ಥಿ ಎಚ್‌.ಸಿ. ನವೀನ್‌ ಕುಮಾರ್ ಸೇರಿದಂತೆ ಒಂಬತ್ತು ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು 2022ರ ಮಾರ್ಚ್‌ 7ಕ್ಕೆ ಮುಂದೂಡಿದೆ.

ವಿಶ್ವವಿದ್ಯಾಲಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ ಹೊಳ್ಳ ಅವರು, ‘ಭಾರತೀಯ ವಕೀಲ ಪರಿಷತ್ ನಿರ್ದೇಶನದ ಅನುಸಾರವೇ ಕೆಎಸ್‌ಎಲ್‌ಯು ಪರೀಕ್ಷೆ ನಡೆಸಬೇಕಿದೆ’ ಎಂದು ಹೇಳಿದರು. ಈ ಮಾತನ್ನು ಪರಿಗಣಿಸಿದ ನ್ಯಾಯಪೀಠ, ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶಿಸಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು