ಮಂಡ್ಯ: ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಗರದ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಜೂಜಾಡುತ್ತಿದ್ದ 55 ಮಂದಿಯನ್ನು ಬಂಧಿಸಿರುವ ಪೊಲೀಸರು ಅವರಿಂದ ₹18 ಲಕ್ಷ ನಗದು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರದ ಸ್ಪೋರ್ಟ್ಸ್ ಕ್ಲಬ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪ್ರತಿ ಕೊಠಡಿಯಲ್ಲಿ ಸ್ಥಳೀಯ ಉದ್ಯಮಿಗಳು, ಗಣ್ಯ ವ್ಯಕ್ತಿಗಳು, ಶ್ರೀಮಂತರೇ ಹೆಚ್ಚಿನ ಸಂಖ್ಯೆಯಲ್ಲಿ ಜೂಜಾಟದಲ್ಲಿ ತೊಡಗಿದ್ದರು. ಮಂಡ್ಯದ ಸ್ಪೋರ್ಟ್ಸ್ ಕ್ಲಬ್ ಜೂಜು ಅಡ್ಡೆಯಾಗಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ತಕ್ಷಣ ಕಾರ್ಯಪ್ರವೃತ್ಜೂಜಾಟಕ್ಕೆ ಇಟ್ಟಿದ್ದ ₹18 ಲಕ್ಷ ವಶಪಡಿಸಿಕೊಂಡರು.
‘ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾಗಿರುವ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಅಕ್ರಮ ಜೂಜಾಟ ಈಚೆಗೆ ಹೆಚ್ಚುತ್ತಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮ ಜೂಜಾಟ ನಿಷೇಧಿಸಲಾಗಿದ್ದು, ಅಕ್ರಮ ಜೂಜಾಟದಲ್ಲಿ ಭಾಗಿಯಾದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಎಚ್ಚರಿಕೆ ನೀಡಿದ್ದರು.
ಡಿವೈಎಸ್ಪಿ ಓಂಪ್ರಕಾಶ್ ಅವರ ನೇತೃತ್ವದಲ್ಲಿ ಬುಧವಾರ ಕ್ಲಬ್ ಮೇಲೆ ದಾಳಿ ನಡೆಸಿದರು.
ಬಂಧನಕ್ಕೊಳಗಾದವರನ್ನು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಜೂಜು ಅಡ್ಡವಾಗುತ್ತಿರುವ ಸ್ಪೋರ್ಟ್ಸ್ ಕ್ಲಬ್ ಮೇಲೆ ನಿಗಾ ವಹಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದರು.
ದಾಳಿಯಲ್ಲಿ ಸಿಪಿಐ ಎಲ್.ಅರುಣ್, ಪಿಎಸ್ಐಗಳಾದ ದೀಕ್ಷಿತ್ ಮತ್ತು ವರ್ಷಾ ಅವರ ತಂಡ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.