ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದ ಉಕ್ಕಲಿಯಲ್ಲಿ ಲಘು ಭೂಕಂಪ

Last Updated 22 ಮಾರ್ಚ್ 2022, 11:33 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ಕೇಂದ್ರಿತವಾಗಿ ಮಂಗಳವಾರ ಬೆಳಿಗ್ಗೆ 11.21ಕ್ಕೆ ಲಘು ಭೂಕಂಪವಾಗಿದೆ.

ರಿಕ್ಟರ್‌ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ ಎಂದುಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಖಚಿತಪಡಿಸಿದೆ.

ವಿಜಯಪುರ ನಗರ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ಭೂಮಿಯೊಳಗಿಂದ ಭಾರೀ ಶಬ್ಧ ಹೊರಹೊಮ್ಮಿತು. ಭಯಭೀತರಾದ ಜನರು ರಕ್ಷಣೆಗಾಗಿ ತಮ್ಮ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಓಡಿ ಬಂದರು. ಮನೆ, ಕಟ್ಟಡಗಳಿಗೆ ಯಾವುದೇ ಹಾನಿಯಾಗಿಲ್ಲ.

ಕಳೆದ ಮಳೆಗಾಲದಲ್ಲಿ ಜಿಲ್ಲೆಯ ವಿವಿಧೆಡೆ ಏಳೆಂಟು ಬಾರಿ ಇದೇ ರೀತಿ ಲಘು ಭೂಕಂಪನವಾಗಿತ್ತು. ಆ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದ ತಜ್ಞರು, ಮಳೆ ಹೆಚ್ಚಾದಾಗ ಹಾಗೂ ಆಲಮಟ್ಟಿ ಜಲಾಶಯ ಭರ್ತಿಯಾದಾಗ ಈ ರೀತಿಯ ಲಘು ಭೂಕಂಪವಾಗುವುದು ಸಹಜ. ಇದಕ್ಕೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಧೈರ್ಯತುಂಬಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT