ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಿಂದ ಸ್ವದೇಶಕ್ಕೆ ಬಂದು ನಿಟ್ಟುಸಿರು ಬಿಟ್ಟ ಉಳ್ಳಾಲ ನಿವಾಸಿ

Last Updated 19 ಆಗಸ್ಟ್ 2021, 12:08 IST
ಅಕ್ಷರ ಗಾತ್ರ

ಮಂಗಳೂರು: ಅಫ್ಗಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಲ್ಲಿ ಸಿಲುಕಿದ್ದ ಭಾರತೀಯರ ಪೈಕಿ ಒಬ್ಬರಾದ ಉಲ್ಲಾಳದ ಮೆಲ್ವಿನ್ ಎಂಬವರು ಸ್ವದೇಶಕ್ಕೆ ಮರಳಿದ್ದಾರೆ.

ಕಾಬೂಲ್‌ನ ನ್ಯಾಟೋ ಮಿಲಿಟರಿ ಬೇಸ್ ಕ್ಯಾಂಪ್ ಆಸ್ಪತ್ರೆಯ ವಿದ್ಯುತ್ ನಿರ್ವಹಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೆಲ್ವಿನ್, ಬುಧವಾರ ಕಾಬೂಲ್‌ನಿಂದ ಭಾರತೀಯ ವಾಯುಪಡೆ (ಐಎಎಫ್) ವಿಮಾನದಲ್ಲಿ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದರು.

ಅವರ ಸಹೋದರ ಇನ್ನೂ ಅಫ್ಸ್ತಾನದಲ್ಲಿ ಸಿಲುಕಿಕೊಂಡಿದ್ದು, ಶೀಘ್ರವೇ ಭಾರತಕ್ಕೆ ಮರಳುವ ನಿರೀಕ್ಷೆ ಇದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮೆಲ್ವಿನ್, ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ, ಭದ್ರತಾ ಪಡೆಗಳು ಮತ್ತು ತನ್ನ ಕಂಪನಿಯ ಏಳು ಉದ್ಯೋಗಿಗಳು ಸೇರಿದಂತೆ 160 ಜನರನ್ನು ಬುಧವಾರ ಬೆಳಿಗ್ಗೆ 5 ಗಂಟೆಗೆ ಕಾಬೂಲ್‌ನಿಂದ ಗುಜರಾತ್‌ನ ಜಾಮ್‌ನಗರದ ಐಎಎಫ್ ಕೇಂದ್ರ ಮತ್ತು ದೆಹಲಿಗೆ ಕರೆತರಲಾಯಿತು ಎಂದು ಅವರು ಹೇಳಿದರು.

ಬುಧವಾರ ಬೆಂಗಳೂರಿಗೆ ಬಂದಿದ್ದ ಮೆಲ್ವಿನ್ ಇಂದು ಉಳ್ಳಾಲ ತಲುಪಿದರು. ‘ನಮ್ಮ ಸಂಸ್ಥೆಯು ಅಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಇತರರನ್ನು ನಾರ್ವೆ, ಲಂಡನ್ ಮತ್ತು ಕತಾರ್ ಸೇರಿದಂತೆ ವಿವಿಧ ಸ್ಥಳಗಳಿಗೆ ಶಿಫ್ಟ್ ಮಾಡಿದೆ’ಎಂದು ಹೇಳಿದ್ದಾರೆ. ಅವರನ್ನು ಆಯಾ ದೇಶಗಳಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ನಂತರ ಅವರು ಭಾರತಕ್ಕೆ ಮರಳುತ್ತಾರೆ ಎಂದು ಮೆಲ್ವಿನ್ ಹೇಳಿದರು.

ಮೆಲ್ವಿನ್ ಸಹೋದರ ಡೆಮಿ, ಕಾಬೂಲ್ ಮಿಲಿಟರಿ ಬೇಸ್ ಕ್ಯಾಂಪ್‌ನಲ್ಲಿ ಹವಾನಿಯಂತ್ರಣ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಭಾರತಕ್ಕೆ ಮರಳಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT