ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲದಲ್ಲಿ ಬಾಲಕನ ಕೊಲೆ ಪ್ರಕರಣ: ಪಬ್‌ಜಿ ಜತೆಗಾರ ಪೊಲೀಸ್‌ ವಶಕ್ಕೆ

Last Updated 4 ಏಪ್ರಿಲ್ 2021, 14:46 IST
ಅಕ್ಷರ ಗಾತ್ರ

ಉಳ್ಳಾಲ: ಇಲ್ಲಿನ ಕೆ.ಸಿ ರೋಡು ಬಳಿ ಬಾಲಕನ ಕೊಲೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್‌ ಜಿ ಜತೆಗಾರ ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಕೀಫ್‌ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ಆರೋಪಿ ಬಾಲಕನ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ಆರೋಪಿ, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ಆರೋಪಿ- ಹಕೀಫ್‌ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್‌ ಸಣ್ಣ ಕಲ್ಲೆಸೆದು ದೀಪಕ್‌ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ಆರೋಪಿ ದೊಡ್ಡ ಕಲ್ಲನ್ನು ಹಕೀಫ್‌ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ಆರೋಪಿ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್‌ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

ಸ್ಥಳಕ್ಕೆ ಕಮೀಷನರ್ ಭೇಟಿ: ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT