ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಶಾಲೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರುಪ್ಸ ಆಗ್ರಹ

Last Updated 15 ಫೆಬ್ರುವರಿ 2023, 16:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸಲು ಇದುವರೆಗೂ ಅವಕಾಶ ಮಾಡಿಕೊಟ್ಟಿದ್ದ ಅಧಿಕಾರಿಗಳ ವಿರುದ್ಧ ಶಿಕ್ಷಣ ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸ) ಒತ್ತಾಯಿಸಿದೆ.

ಖಾಸಗಿ ಶಾಲೆಗಳಿಂದ ಹಣ ಸಂಗ್ರಹಿಸುತ್ತಿದ್ದ ಇಲಾಖೆಯ ಭ್ರಷ್ಟ ಅಧಿಕಾರಿಗಳ ಕುರಿತು ರುಪ್ಸ ಪ್ರಧಾನಮಂತ್ರಿಗೆ ದಾಖಲೆ ಸಮೇತ ಪತ್ರ ಬರೆದ ನಂತರ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, 1,316 ಅನಧಿಕೃತ ಶಾಲೆಗಳನ್ನು ಗುರುತಿಸಿದೆ. ಸರಿಯಾದ ತಪಾಸಣೆ ಮಾಡಿದರೆ ಐದು ಸಾವಿರಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಸಿಗುತ್ತವೆ ಎಂದು ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

ಹತ್ತಾರು ವರ್ಷಗಳಿಂದ ಕೆಲ ಶಾಲೆಗಳು ಬಹಿರಂಗವಾಗಿ ಪೋಷಕರು, ಮಕ್ಕಳಿಗೆ ಮೋಸ ಮಾಡುತ್ತಿವೆ. ಅಧಿಕಾರಿಗಳು ಹೊಣೆ ಹೊರಬೇಕು. ಬೆಂಗಳೂರು ನಗರದಲ್ಲೇ ಅನುಮತಿ ಇಲ್ಲದೆ ನೂರಾರು ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಹೆಸರಿನಲ್ಲಿ ಬಂಡವಾಳಶಾಹಿ ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಶುಲ್ಕ ರೂಪದಲ್ಲಿ ದೊಡ್ಡಮೊತ್ತದ ಹಣ ವಸೂಲಿ ಮಾಡುತ್ತಿವೆ. ಅಂತಹ ಶಾಲೆಗಳಿಗೆ ಮಂತ್ರಿಗಳು, ಶಾಸಕರ ಕೃಪಾಕಟಾಕ್ಷವಿದೆ. ಕೆಲ ಶಾಲೆಗಳು ಅವರ ಒಡೆತನದಲ್ಲೇ ಇವೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT