ಬೆಂಗಳೂರು: ಸಂಪುಟ ವಿಸ್ತರಣೆ ನಂತರ ಖಾತೆ ವಿಚಾರವಾಗಿ ಎದ್ದಿದ್ದ ಅಸಮಾಧಾನಗಳಿಗೆ ಅಂತ್ಯಹಾಡುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೆಲ ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ.

ಅಬಕಾರಿ ಖಾತೆ ಕೊಟ್ಟಿದ್ದರಿಂದ ಮುನಿಸಿಕೊಂಡಿದ್ದ ಎಂಟಿಬಿ ನಾಗರಾಜ್ ಅವರಿಗೆ ಸ್ಥಳಿಯಾಡಳಿತ ಮತ್ತು ಸಕ್ಕರೆ ಖಾತೆ ನೀಡಲಾಗಿದೆ. ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ.

ವೈದ್ಯಕೀಯ ಶಿಕ್ಷಣ ಖಾತೆ ಪಡೆದು ಬೇಸರಗೊಂಡಿದ್ದ ಜೆ.ಸಿ ಮಾಧುಸ್ವಾಮಿ ಅವರಿಗೆ ಹೆಚ್ಚುವರಿ ಖಾತೆ ಸಿಕ್ಕಿದೆ. ಹಜ್ ಮತ್ತು ವಕ್ಫ್ ನೀಡಲಾಗಿದೆ. ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ತೋಟಗಾರಿಕೆ ಮತ್ತು ರೇಷ್ಮೆ ಖಾತೆಯನ್ನು ಆರ್ ಶಂಕರ್ಗೆ ನೀಡಲಾಗಿದೆ. ನಿನ್ನೆ ತೋಟಗಾರಿಕೆ ಮತ್ತು ಸಕ್ಕರೆ ಖಾತೆಯನ್ನು ಗೋಪಾಲಯ್ಯ ಅವರಿಗೆ ನೀಡಲಾಗಿತ್ತು.

ಯುವಜನಸೇವೆ ಮತ್ತು ಕ್ರೀಡೆ ಖಾತೆ ಸಚಿವರಾಗಿದ್ದ ಕೆ.ಸಿ ನಾರಾಯಣ ಗೌಡ ಅವರಿಗೆ ಮುಖ್ಯಮಂತ್ರಿ ಅವರ ಬಳಿ ಇದ್ದ ಯೋಜನೆ, ಸಾಂಖ್ಯಿಕ ಅಂಕಿ ಅಂಶಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಎಂ.ಟಿ.ಬಿ ನಾಗರಾಜು, ಗೋಪಾಲಯ್ಯ, ನಾರಾಯಣಗೌಡ, ಮಾಧುಸ್ವಾಮಿ ಅವರು ಗುರುವಾರ ತಮ್ಮ ಖಾತೆಗಳ ವಿಚಾರವಾಗಿ ಅಸಮಾಧಾನ ಹೊರ ಹಾಕಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.