ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ನಾಯಕರು ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ: ಸಚಿವ ಆರಗ ಜ್ಞಾನೇಂದ್ರ

Last Updated 9 ಫೆಬ್ರುವರಿ 2022, 15:54 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಸಮವಸ್ತ್ರದ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಇದೇ ರೀತಿಯಲ್ಲಿ ಮುಂದುವರೆದರೆ ಜನರು ಆ ಪಕ್ಷಕ್ಕೆ ತಕ್ಕ ‍ಪಾಠ ಕಲಿಸುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಶಿವಮೊಗ್ಗದಲ್ಲಿ ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಏರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸುಳ್ಳು ಮಾಹಿತಿ ನೀಡಿದ್ದಾರೆ. ಕಾಲೇಜು ಆವರಣದಲ್ಲಿ ರಾಷ್ಟ್ರ ಧ್ವಜ ಹಾರುತ್ತಿರಲಿಲ್ಲ. ಶಿವಕುಮಾರ್ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ಆ ಮೂಲಕ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ’ ಎಂದರು.

ಇಂಥಹ ಬೇಜವಾಬ್ದಾರಿ ಹಾಗೂ ಹಸಿ ಸುಳ್ಳು ಹೇಳಿಕೆ ಒಬ್ಬ ಹಿರಿಯ ಕಾಂಗ್ರೆಸ್ ನಾಯಕರಿಂದ ಬರುವುದರ ಹಿಂದಿನ ಉದ್ದೇಶ ಏನಿರಬಹುದು ಎಂದು ಸಾರ್ವಜನಿಕರು ಊಹಿಸುತ್ತಾರೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತೀಯ ಭಾವನೆಗಳನ್ನು ತುಂಬುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಈಗ ವಿಪಕ್ಷ ಸ್ಥಾನದಲ್ಲಿದೆ. ಇದೇ ಪ್ರವೃತ್ತಿ ಮುಂದುವರಿಸಿದರೆ ಇವರ ಪಕ್ಷವನ್ನು ಜನರು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT