ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರದೃಷ್ಟಿಯ ಬಜೆಟ್‌: ಈಶ್ವರಪ್ಪ

Last Updated 1 ಫೆಬ್ರುವರಿ 2022, 13:47 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಬಜೆಟ್ ದೂರದೃಷ್ಟಿಯಿಂದ ಕೂಡಿದ್ದು, ಕೈಗಾರಿಕಾ ಕ್ಷೇತ್ರ, ಮೂಲಸೌಕರ್ಯ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಎಲ್ಲ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಬಂಡವಾಳ ಸೃಷ್ಟಿ ಹಾಗೂ ಉದ್ಯೋಗ ಸೃಷ್ಟಿಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದರಿಂದ 60 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಪ್ರಧಾನ ಮಂತ್ರಿಗಳ ಗತಿಶಕ್ತಿ ಯೋಜನೆಯಡಿ 7 ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅತಿ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT