ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಕ್ಷೇತ್ರಗಳಲ್ಲಿ ಆತ್ಮನಿರ್ಭರ ಭಾರತವನ್ನಾಗಿಸುವ ಬಜೆಟ್: ಆರ್‌ ಅಶೋಕ

Last Updated 1 ಫೆಬ್ರುವರಿ 2022, 14:18 IST
ಅಕ್ಷರ ಗಾತ್ರ

ಬೆಂಗಳೂರು: ‘ಕೃಷಿಕರು, ಉದ್ದಿಮೆದಾರರು, ಯುವಕರಿಗೆ ಸಹಾಯವಾಗುವ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ ಅತ್ಯಂತ ಜನಸ್ನೇಹಿ ಬಜೆಟ್. ಎಲ್ಲ ಕ್ಷೇತ್ರಗಳಲ್ಲಿ ಆತ್ಮನಿರ್ಭರ ಭಾರತವನ್ನಾಗಿ ಮಾಡುವಲ್ಲಿ ಇದು ಸಹಾಯಕವಾಗಿದೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ತಿಳಿಸಿದ್ದಾರೆ.

‘2025ರೊಳಗೆ ಪ್ರತೀ ಹಳ್ಳಿಗಳಲ್ಲೂ ಆಪ್ಟಿಕಲ್ ಫೈಬರ್ ಕೇಬಲ್ ಸೌಕರ್ಯ ನೀಡಲಾಗುವುದು. ಆರೋಗ್ಯ ಕ್ಷೇತ್ರಕ್ಕೆ ಡಿಜಿಟಲ್ ಸೇವೆ, ಸಹಜ ಕೃಷಿಗೆ ಒತ್ತು, ಡಿಜಿಟಲ್ ಕರೆನ್ಸಿ ವಿತರಣೆಗೆ ತೀರ್ಮಾನ ಕೈಗೊಳ್ಳಲಾಗಿದೆ. ನದಿ ಜೋಡಣೆಗೆ ಸಿದ್ದತೆ, ಇಂತಹ ಹಲವಾರು ಕಾರ್ಯಕ್ರಮ ನೀಡಿದ್ದಾರೆ. ಇದು ಚುನಾವಣೆಯನ್ನು ಲಕ್ಷದಲ್ಲಿಟ್ಟು ಮಂಡಿಸಿದ ಬಜೆಟ್ ಅಲ್ಲ, ಜನರನ್ನು ಲಕ್ಷದಲ್ಲಿಟ್ಟು ಮಂಡಿಸಿದ ಬಜೆಟ್’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT