ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ 2ಎ, 2ಬಿಗೆ ಕೇಂದ್ರದ ಸಮ್ಮತಿ: ಡಿವಿಎಸ್

ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ 2 ಎ ಮತ್ತು 2ಬಿಯ ಅನುಮೋದನೆ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

ಯೋಜನೆಯು ಇತರ ನಗರ ಸಾರಿಗೆ ವ್ಯವಸ್ಥೆಗಳೊಂದಿಗೆ ಸಮರ್ಥ ಮತ್ತು ಪರಿಣಾಮಕಾರಿ ರೀತಿಯಲ್ಲಿ ಏಕೀಕರಣವನ್ನು ಒಳಗೊಂಡಿರುತ್ತದೆ ಮತ್ತು ನಗರದ ನಗರ ಸಾರಿಗೆ ವ್ಯವಸ್ಥೆಯನ್ನು ಸುಗಮಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಒಟ್ಟು 58.19 ಕಿ.ಮೀ. ಉದ್ದದ ರೈಲು ಯೋಜನೆ ಇದಾಗಿದ್ದು, ₹ 14,788 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ.

ಯೋಜನೆ ಅಂಗೀಕಾರ ಸಿಕ್ಕ ದಿನಾಂಕದಿಂದ ಈ ಮೆಗಾ ಯೋಜನೆ 5 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT