ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನ್ಯಾಯ’ದ ಚಾಟಿಗೆ ಎದಿರೇಟು! ಚರ್ಚೆಗೆ ಗುರಿಯಾದ ಸದಾನಂದಗೌಡ, ಸಿ.ಟಿ.ರವಿ ಹೇಳಿಕೆ

Last Updated 13 ಮೇ 2021, 20:33 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನ ದುರಿತ ಕಾಲದಲ್ಲಿ ಆಳುವವರ ನಿರ್ಲಕ್ಷ್ಯದಿಂದಾಗಿ ಜನಸಾಮಾನ್ಯರು ಎದುರಿಸುತ್ತಿರುವ ಸಂಕಟಗಳಿಗೆ ಧ್ವನಿಯಾಗಿ ಸರ್ಕಾರಕ್ಕೆ ಚಾಟಿ ಬೀಸಿದ ನ್ಯಾಯಾಂಗದ ನಡೆಯನ್ನು ವಿಮರ್ಶೆಗೆ ಒಡ್ಡಿದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಶಾಸಕರೂ ಆಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ಸಾರ್ವಜನಿಕವಾಗಿ ಚರ್ಚೆಗೆ ಗುರಿಯಾಗಿದೆ.

ಕರ್ನಾಟಕಕ್ಕೆ ಅಪೇಕ್ಷಿತ ಪ್ರಮಾಣದಲ್ಲಿ ಆಮ್ಲಜನಕ ಪೂರೈಸದೇ ಇರುವ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್‌, ‘ಪ್ರಾಣವಾಯು’ ಪೂರೈಕೆಯನ್ನು ಖಾತ್ರಿ ಪಡಿಸುವಂತೆ ಕಟ್ಟಪ್ಪಣೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅಲ್ಲಿಯೂ ಕೂಡ ಕೇಂದ್ರ ಸರ್ಕಾರ ಮುಖಭಂಗ ಅನುಭವಿಸಿತ್ತು.

ಕೋವಿಡ್ ರೋಗಿಗಳಿಗೆ ಹಾಸಿಗೆ ಸೇರಿದಂತೆ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಕೊರತೆಯ ಬಗ್ಗೆ ಪರಾಮರ್ಶೆ ನಡೆಸಿ ಸರ್ಕಾರಕ್ಕೆ ನಿರ್ದೇಶನ ನೀಡಿದ್ದ ಹೈಕೋರ್ಟ್‌, ಚಾಮರಾಜನಗರ ದುರಂತದ ತನಿಖೆಗೆ ಪ್ರತ್ಯೇಕ ಸಮಿತಿ ರಚನೆಯಂತಹ ದಿಟ್ಟ ನಿರ್ಧಾರ ಕೈಗೊಂಡಿತ್ತು. ಅಷ್ಟಲ್ಲದೇ ಲಸಿಕೆ ಅಭಿಯಾನದ ವಿಷಯದಲ್ಲಿ ಸರ್ಕಾರದ ಅಸಡ್ಡೆಗೆ ಕೆಂಡ ಕಾರಿತ್ತು. ಗುರುವಾರ ಈ ಬಗ್ಗೆ ವಿಚಾರಣೆ ನಡೆಸಿದಾಗಲೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಅಸಹನೆ ವ್ಯಕ್ತಪಡಿಸಿದೆ.

ಹೈಕೋರ್ಟ್‌ ನ್ಯಾಯಮೂರ್ತಿಗಳು ಸರ್ಕಾರದ ಧೋರಣೆಯ ಬಗ್ಗೆ ಮಾಡಿದ ವಿಮರ್ಶೆ ಕುರಿತು ಪ್ರತಿಕ್ರಿಯಿಸಿದ ಸಚಿವ ಹಾಗೂ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT