ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.
ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.
'ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಹೇಳಲಾಗುವುದು' ಎಂದು ಹೇಳಿದರು.
'ರಾಜಕೀಯದಲ್ಲಿ ವಿವಿಧ ಪಕ್ಷಗಳ ನಾಯಕರು ನೀಡುವ ಹೇಳಿಕೆ ರಾಜಕೀಯ ವ್ಯವಸ್ಥೆಯ ಭಾಗ. ಆದರೆ ಅಧಿಕಾರಿಗಳು ಈ ರೀತಿ ಪರಸ್ಪರ ಕೆಸರೆರಚುತ್ತಿರುವುದು ಸರಿಯಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಷಯ ಅತ್ಯಂತ ದುರ್ದೈವ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು' ಎಂದು ಜೋಶಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.