ಶನಿವಾರ, ಜನವರಿ 16, 2021
25 °C
ಚಿತ್ರದುರ್ಗದಿಂದ ಜೀರೊ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ

ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಸದಾನಂದ ಗೌಡ ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು / ಚಿತ್ರದುರ್ಗ: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕುಸಿದು ಬಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ
ಗೌಡ ಅವರನ್ನು ಬೆಂಗಳೂರಿನ ಆಸ್ಟರ್‌ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಚಿತ್ರದುರ್ಗದಲ್ಲಿ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಭಾನುವಾರ ಸಂಜೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅವರ ಆರೋಗ್ಯದ ಮೇಲೆ ಮುಂದಿನ 24 ಗಂಟೆ ನಿಗಾ ಇರಿಸಲಾಗುವುದು.

ಚಿತ್ರದುರ್ಗದಲ್ಲಿರುವ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿಸಚಿವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್‌ನಲ್ಲಿ ಜೀರೊ ಟ್ರಾಫಿಕ್‌ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು.

ಕುಸಿದುಬಿದ್ದ ಸಚಿವರು: ಚಿತ್ರದುರ್ಗದ ಹೋಟೆಲ್‌ ನವೀನ್‌ ರೀಜೆನ್ಸಿಗೆ ಮಧ್ಯಾಹ್ನ 1.45ಕ್ಕೆ ಊಟಕ್ಕೆ ತೆರಳಿದ್ದರು. ಕಾರಿನಿಂದ ಕೆಳಗಿಳಿದ ಸಚಿವರನ್ನು ಸ್ಥಳೀಯ ಬಿಜೆಪಿ ನಾಯಕರು ಸ್ವಾಗತಿಸಿದ್ದರು. ಹೂವಿನಹಾರ ಹಾಕಿಸಿಕೊಂಡು ಮುಂದಡಿ ಇಟ್ಟ ಕ್ಷಣಾರ್ಧದಲ್ಲಿ ಸಚಿವರು ಕುಸಿದುಬಿದ್ದರು ಎಂದು ಸ್ಥಳದಲ್ಲಿದ್ದ ಬಿಜೆಪಿ ಮುಖಂಡರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು