ಸೋಮವಾರ, ಅಕ್ಟೋಬರ್ 3, 2022
21 °C
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಈಶ್ವರಪ್ಪ ವ್ಯಂಗ್ಯ

ಪಾಕಿಸ್ತಾನ, ಬಾಂಗ್ಲಾದೇಶವನ್ನು ಒಗ್ಗೂಡಿಸಿ: ಕೆ.ಎಸ್. ಈಶ್ವರಪ್ಪ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ‘ಅಖಂಡ ಭಾರತವನ್ನು ತುಂಡು ಮಾಡಿದ ಕಾಂಗ್ರೆಸ್‌ನವರು ಈಗ ಭಾರತ ಜೋಡೋ ಯಾತ್ರೆ ಮಾಡಲು ಹೊರಟಿದ್ದಾರೆ. ನಾವು ಕಳೆದುಕೊಂಡ ಪಾಕಿಸ್ತಾನ, ಬಾಂಗ್ಲಾದೇಶವನ್ನು ಒಗ್ಗೂಡಿಸಿ ಭಾರತ್ ಜೋಡೋ ಯಾತ್ರೆ ಮಾಡಿ ಅಖಂಡ ಭಾರತ ಮಾಡಲಿ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವುದು ಸಂತೋಷದ ವಿಚಾರ. ಹಿಂದೆ ಅಧಿಕಾರಕ್ಕಾಗಿ ದೇಶವನ್ನು ಮೂರು ತುಂಡು ಮಾಡಿದವರಿಗೆ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಉತ್ತರ ಕೊಡಲಿ’ ಎಂದರು.

ಹಿಂದೆ ಭಾರತ್ ತೋಡೋ ಮಾಡಿದ್ದರು. ಈಗ ಭಾರತ್ ಜೋಡೋ ಮಾಡಲು ಹೊರಟಿದ್ದಾರೆ. ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಹೊರಟಿದ್ದಾರೆ. ಯಾತ್ರೆ ಮಾಡಿದರಷ್ಟೇ ಸಾಲದು, ಅವರ ಭಾವನೆಯೊಳಗೆ ಭಾರತ್ ಜೋಡೋ ಇರಬೇಕು ಎಂದು ಹೇಳಿದರು.

‘ದೊಡ್ಡಬಳ್ಳಾಪುರದಲ್ಲಿ ಸೆಪ್ಟೆಂಬರ್ 10 ರಂದು ಜನಸ್ಪಂದನಾ ಸಮಾವೇಶ ಮಾಡುವ ಮೂಲಕ ಜನರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ತಿಳಿಸಲಾಗುವುದು. 3-4 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಸೆಪ್ಟೆಂಬರ್ 9ರಂದು ವಿಜೃಂಭಣೆಯಿಂದ ನಡೆಯಲಿದ್ದು, ಹಿಂದೂ, ಮುಸ್ಲಿಂ ಸೇರಿ ಎಲ್ಲಾ ಧರ್ಮದವರೂ ಭಾಗವಹಿಸಲಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು