ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 4ವರ್ಷಗಳಲ್ಲಿ 7,133 ಅಸ್ಪೃಶ್ಯತೆ ಪ್ರಕರಣ ದಾಖಲು: ಶ್ರೀನಿವಾಸ ಪೂಜಾರಿ

Last Updated 25 ಡಿಸೆಂಬರ್ 2021, 1:49 IST
ಅಕ್ಷರ ಗಾತ್ರ

ಬೆಳಗಾವಿ: ‘ಅಸ್ಪೃಶ್ಯತೆ ಆಚರಣೆ ಆರೋಪದಡಿ 2018ರಿಂದ 2021ರ ನವೆಂಬರ್‌ ಅಂತ್ಯದವರೆಗೆ ರಾಜ್ಯದಲ್ಲಿ 7,133 ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಬಿಜೆಪಿಯ ತೇಜಸ್ವಿನಿ ಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ‘ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌.ಟಿ) ಜನರ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 1,852 ಪ್ರಕರಣಗಳು ಎಸ್‌.ಸಿ. ಮತ್ತು ಎಸ್‌.ಟಿ. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದವು’ ಎಂದು ಮಾಹಿತಿ ನೀಡಿದ್ದಾರೆ.

‘ಅಸ್ಪೃಶ್ಯತೆ ಆಚರಣೆ ಆರೋಪ ದಡಿ ನಾಲ್ಕು ವರ್ಷಗಳಲ್ಲಿ 20 ಪ್ರಕರಣಗಳನ್ನು ನಾಗರಿಕ ಹಕ್ಕು ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ದಾಖಲಿಸಲಾಗಿದೆ. ಕೊಪ್ಪಳ ಜಿಲ್ಲೆ ಯಲ್ಲಿ 13, ಚಿಕ್ಕಮಗಳೂರು ಜಿಲ್ಲೆಯಲ್ಲಿ 5, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಿಸಲಾಗಿದೆ’ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT