ಬುಧವಾರ, ಜುಲೈ 6, 2022
23 °C
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಮಾನ್ಯತೆ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರಿಗೆರೆ (ಚಿತ್ರದುರ್ಗ): ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿನ ತರಳಬಾಳು ಮಠದ ಆವರಣದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಅಂತಿಮ ದಿನದಂದು ನಡೆದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸದ್ಧರ್ಮ ಸಿಂಹಾಸನಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಉನ್ನತ ಸಮಿತಿ ಭದ್ರಾ ಮೇಲ್ದಂಡೆಗೆ ಸಮ್ಮತಿ ನೀಡಿದೆ. ಇದು ರಾಜ್ಯದ ಮೊದಲ ರಾಷ್ಟ್ರೀಯ ಜಲಯೋಜನೆಯಾಗಿದೆ. ಇದರಿಂದ ₹ 12,500 ಕೋಟಿ ನೆರವು ಕರ್ನಾಟಕಕ್ಕೆ ಸಿಗಲಿದೆ. ಯೋಜನೆ ಅನುಷ್ಠಾನ ಇನ್ನಷ್ಟು ಚುರುಕು ಪಡೆಯಲಿದೆ’ ಎಂದು ಹೇಳಿದರು.

‘ಭದ್ರಾ ಮೇಲ್ದಂಡೆ ಯೋಜನೆಯನ್ನು ಬಿ.ಎಸ್‌.ಯಡಿಯೂರಪ್ಪ ಅವರು ರೂಪಿಸಿದ್ದರು. ಇದಕ್ಕೆ ಸಾಕಷ್ಟು ವಿರೋಧವಿತ್ತು. ಇದರ ನಡುವೆಯೂ ದಿಟ್ಟ ತೀರ್ಮಾನ ಕೈಗೊಂಡಿದ್ದರ ಪರಿಣಾಮವಾಗಿ ಯೋಜನೆ ರಾಷ್ಟ್ರೀಯ ಮಾನ್ಯತೆ ದೊರೆಯಲು ಸಾಧ್ಯವಾಗಿದೆ. ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಬೇಕು ಎಂಬ ಕನಸು ನನಸಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು