ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉರಿಗೌಡ-ನಂಜೇಗೌಡ ಸುಳ್ಳು ಸುದ್ದಿ ವಿರುದ್ಧ ಒಕ್ಕಲಿಗರ ಹೋರಾಟ: ಸಿ.ಎನ್‌.ಬಾಲಕೃಷ್ಣ

Last Updated 20 ಮಾರ್ಚ್ 2023, 6:08 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ಕೆಲವರು ಉರಿಗೌಡ, ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್‌.ಬಾಲಕೃಷ್ಣ ಖಂಡಿಸಿದ್ದಾರೆ.


ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಈಗ ಸೃಷ್ಟಿಸಿ ಪ್ರಚಾರ ಮಾಡುತ್ತಿರುವುದರ ಹುನ್ನಾರ ಏನು? ಎಂದು ಪ್ರಶ್ನಿಸಿದ್ದಾರೆ.


ಈ ರೀತಿ ಸುಳ್ಳಿನೊಂದಿಗೆ ಒಕ್ಕಲಿಗರ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ ಎಂದು ಶ್ರವಣಬೆಳಗೊಳ ಶಾಸಕರೂ ಆಗಿರುವ ಸಿ.ಎನ್‌.ಬಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.


ರಾಜ್ಯ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುವುದನ್ನು ತಡೆಯದಿದ್ದರೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸ್ಪಟಿಕಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT