ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಿಧನಕ್ಕೆ ಚೆನ್ನೈಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಂತಾಪ ಸೂಚಿಸಿ ಕನ್ನಡದಲ್ಲೇ ಟ್ವೀಟ್ ಮಾಡಿದೆ.
‘ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. ಚೆನ್ನೈಯಲ್ಲಿರುವ ಅಮೆರಿಕ ದೂತಾವಾಸ ಕಚೇರಿಯಲ್ಲಿ 2018ರಲ್ಲಿ ‘ಪ್ರೈಡ್’ ತಿಂಗಳ ಆಚರಣೆಯ ಪ್ರಯುಕ್ತ ತೃತೀಯ ಲಿಂಗಿಗಳ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ‘ನಾನು ಅವನಲ್ಲ–ಅವಳು’ ಪ್ರದರ್ಶನ ಮತ್ತು ಸಂವಾದದಲ್ಲಿ ಸಂಚಾರಿ ವಿಜಯ್ ಭಾಗಿಯಾಗಿದ್ದರು. ಆರ್‌ಐಪಿ’ ಎಂದು ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ
ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿರುವುದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. #RIP
— US Consulate Chennai (@USAndChennai) June 15, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.