ಬುಧವಾರ, ಜುಲೈ 28, 2021
20 °C

ಮಾತು ತಪ್ಪಿದ ಸೋಮಣ್ಣ ರಾಜೀನಾಮೆ ನೀಡಲಿ: ಕೆ.ಸಿ.ಗಂಗಾಧರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಸತಿ ಹೀನರಿಗೆ 30 ಸಾವಿರ ಮನೆಗಳನ್ನು ಹಂಚಿಕೆ ಮಾಡುವುದಾಗಿ ಭರವಸೆ ನೀಡಿದ್ದ ಸಚಿವ ವಿ.ಸೋಮಣ್ಣ ಈಗ ಮಾತು ತಪ್ಪಿದ್ದಾರೆ. ಅವರು ಕೂಡಲೇ ರಾಜೀನಾಮೆ ನೀಡಲಿ’ ಎಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಕಾರ್ಯಾಧ್ಯಕ್ಷ ಕೆ.ಸಿ.ಗಂಗಾಧರ್‌ ಒತ್ತಾಯಿಸಿದ್ದಾರೆ.

‘ವಸತಿ ವಂಚಿತರಿಗೆ ಮನೆಗಳನ್ನು ಹಂಚಿಕೆ ಮಾಡದೆ ಹೋದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದ ಸೋಮಣ್ಣ, ಬಸವೇಶ್ವರರ ಮೇಲೆ ಪ್ರಮಾಣ ಕೂಡ ಮಾಡಿದ್ದರು. ಆ ಮಾತಿನಂತೆ ಅವರು ನಡೆದುಕೊಂಡಿಲ್ಲ. ವಚನ ಭ್ರಷ್ಟರಾಗಿರುವ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

‘ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಡವರಿಗೆ ದಿನಸಿ ಕಿಟ್‌ ವಿತರಣೆ ಹಾಗೂ ಕೋವಿಡ್‌ ಲಸಿಕೆ ನೀಡಿಕೆಯಲ್ಲೂ ಅವರು ರಾಜಕೀಯ ಮಾಡಿದ್ದಾರೆ. ಕೇವಲ ಬಿಜೆಪಿಯವರಿಗೆ ಆದ್ಯತೆ ನೀಡಿರುವುದು ಸರಿಯಲ್ಲ. ಶಾಸಕರೇ ಹೀಗೆ ಮಾಡಿದರೆ ಕ್ಷೇತ್ರದ ಇತರ ನಾಗರಿಕರು ಏನು ಮಾಡಬೇಕು. ಇಂತಹ ರಾಜಕೀಯ ಹಗೆತನ ತೋರಬಾರದು. ಈಗಲಾದರೂ ಎಚ್ಚೆತ್ತುಕೊಂಡು ಸ್ವಂತ ಸೂರಿಲ್ಲದವರಿಗೆ ಮನೆ ಒದಗಿಸುವ ಕೆಲಸ ಮಾಡಬೇಕು. ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು