ಶನಿವಾರ, ಸೆಪ್ಟೆಂಬರ್ 18, 2021
30 °C

ಕ್ಯಾಂಟೀನ್‌ಗಳಿಗೆ ರಾಜಕೀಯ ವ್ಯಕ್ತಿಗಳ ಹೆಸರೇಕೆ?: ಸಚಿವ ಸುನಿಲ್ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ಯಾಂಟೀನ್‌ಗಳಿಗೆ ರಾಜಕೀಯ ವ್ಯಕ್ತಿಗಳ ಹೆಸರೇಕೆ? ಅದಕ್ಕೆ ಯಾರ ಹೆಸರು ಇಡಬೇಕು ಅಥವಾ ಬಿಡಬೇಕು ಎಂಬುದರ ಚರ್ಚೆ ಆಗಲಿ. ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್‌ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನ್ನಪೂರ್ಣೇಶ್ವರಿ ಹೆಸರು ಇಟ್ಟರೆ ಬೇರೆ ಪಕ್ಷದವರು ವಿರೋಧ ಏಕೆ ಮಾಡಬೇಕು. ಸರ್ಕಾರಕ್ಕೆ ಹೆಸರು ಬದಲಿಸಬೇಕು ಎಂಬ ಉದ್ದೇಶವಿಲ್ಲ. ಜನರ ಅಭಿಪ್ರಾಯ ಬದಲಿಸಬೇಕು ಎಂದು ಇದೆ’ ಎಂದರು.

‘ಹಿಂದೆ ವಾಜಪೇಯಿ ಅವರ ಅವಧಿ ಸುವರ್ಣ ಚತುಷ್ಪಥ ರಸ್ತೆಗೆ ವಾಜಪೇಯಿ ಹೆಸರು ಇಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ರಸ್ತೆಗಳಲ್ಲಿದ್ದ ಬೋರ್ಡ್‌ಗಳನ್ನೇ ಕಿತ್ತು ಹಾಕಿತು. ಇದು ಎಂಥಾ ಸಂಸ್ಕೃತಿ. ಆದ್ದರಿಂದ ಕಾಂಗ್ರೆಸ್‌ನವರಿಂದ ಸಂಸ್ಕೃತಿ ಕಲಿಯಬೇಕಿಲ್ಲ’ ಎಂದು ಸುನಿಲ್‌ ಹೇಳಿದರು.

ಇದನ್ನೂ ಓದಿ... ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಇಲ್ಲ: ಸಚಿವ ವಿ.ಸುನಿಲ್ ಕುಮಾರ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು