ಮಂಗಳವಾರ, ಅಕ್ಟೋಬರ್ 19, 2021
24 °C

ಲಸಿಕಾ ಅಭಿಯಾನ: ಸಿಬ್ಬಂದಿಗೆ ಭಾನುವಾರ ವಿರಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಲಸಿಕಾ ಅಭಿಯಾನದಲ್ಲಿ ನಿರತರಾಗಿರುವ ಸಿಬ್ಬಂದಿ ಇನ್ನು ಮುಂದೆ ಭಾನುವಾರ ವಿರಾಮ ಪಡೆಯುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ. 

ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದು, ‘ಕಳೆದ ಜ.16ರಿಂದ ಲಸಿಕಾ ಅಭಿಯಾನವನ್ನು ರಾಜ್ಯದಲ್ಲಿ ನಡೆಸಲಾಗುತ್ತಿದೆ. ಹಂತ ಹಂತವಾಗಿ ಲಸಿಕೆಯನ್ನು ಫಲಾನುಭವಿಗಳಿಗೆ ಒದಗಿಸಲಾಗುತ್ತಿದೆ. ಈ ಕಾರ್ಯಕ್ಕೆ ಆರೋಗ್ಯ ಸಿಬ್ಬಂದಿ ನಿರಂತರ ಶ್ರಮಿಸುತ್ತಿದ್ದಾರೆ. ಅವರು ಭಾನುವಾರ ವಿರಾಮ ಪಡೆಯಬಹುದಾಗಿದೆ’ ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಗುರುವಾರ 1.93 ಲಕ್ಷ ಡೋಸ್‌ಗಳಷ್ಟು ಲಸಿಕೆಯನ್ನು ವಿತರಿಸಲಾಗಿದೆ. 4,870 ಸರ್ಕಾರಿ ಕೇಂದ್ರಗಳು ಹಾಗೂ 385 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ವಿತರಿಸಲಾಗಿದೆ. ಈವರೆಗೆ ನೀಡಲಾದ ಲಸಿಕೆಯ ಒಟ್ಟು ಡೋಸ್‌ಗಳ ಸಂಖ್ಯೆ 5.39 ಕೋಟಿ ದಾಟಿದೆ. 3.82 ಕೋಟಿ ಮಂದಿ ಮೊದಲ ಡೋಸ್ ಹಾಗೂ 1.56 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು