ಬೆಂಗಳೂರು: ರಾಜ್ಯದಲ್ಲಿ 24 ಗಂಟೆಯಲ್ಲಿ ಹೊಸದಾಗಿ 751 ಪ್ರಕರಣಗಳು ದಾಖಲಾಗಿದ್ದು 5 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಕೋವಿಡ್-19 ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8909ಕ್ಕೆ ಇಳಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 1,183 ಮಂದಿ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 9,07,729 ಮಂದಿ ರೋಗಮುಕ್ತಿಯನ್ನು ಪಡೆದಿದ್ದಾರೆ.

ರಾಜ್ಯದಲ್ಲಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ ಸಾವಿನ ಸಂಖ್ಯೆ 12,149ಕ್ಕೆ ಏರಿಕೆಯಾಗಿದ್ದು,ಇದುವರೆಗೆ ಒಟ್ಟು 9,28,806 ಕೋವಿಡ್-19 ಪ್ರಕರಣಗಳು ದಾಖಲಾಗಿದೆ.

'7.95 ಲಕ್ಷ 'ಕೋವಿಶೀಲ್ಡ್' ಲಸಿಕೆಯ ಬಾಟಲಿಗಳು ಪುಣೆಯಿಂದ ಮಂಗಳವಾರ ರಾಜ್ಯಕ್ಕೆ ಬಂದಿವೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಲಸಿಕೆಯನ್ನು, ನಗರದ ಆನಂದ ರಾವ್ ವೃತ್ತದಲ್ಲಿರುವ ರಾಜ್ಯಮಟ್ಟದ ದಾಸ್ತಾನು ಕೇಂದ್ರದಲ್ಲಿ ಇರಿಸಲಾಗಿದೆ. ಇದನ್ನು ಚಿತ್ರದುರ್ಗ, ಕಲಬುರ್ಗಿ ಸೇರಿದಂತೆ 5 ಪ್ರದೇಶಿಕ ಕೇಂದ್ರಗಳಿಗೆ ರವಾನಿಸಿ, ಅಲ್ಲಿಂದ ಜಿಲ್ಲೆಗಳಲ್ಲಿನ ದಾಸ್ತಾನು ಕೇಂದ್ರಗಳಿಗೆ ರವಾನಿಸಲಾಗುತ್ತದೆ. ರಾಜ್ಯದಲ್ಲಿ 2,767 ಕೋಲ್ಡ್ ಚೈನ್ ಕೇಂದ್ರಗಳನ್ನು ಗುರುತಿಸಲಾಗಿದೆ.

ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ' ಪ್ರತಿ ಬಾಟಲಿಯಲ್ಲಿ 5 ಎಂ. ಎಲ್ ಡೋಸ್ ಇರಲಿದೆ. ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಲಸಿಕೆ ಖರೀದಿ ಮಾಡಿದೆ. ಒಂದು ಡೋಸ್ ಗೆ 210 ರೂ. ನಿಗದಿ ಮಾಡಿದ್ದು, ಬೇರೆ ಯಾವ ದೇಶವೂ ಇಷ್ಟು ಕಡಿಮೆ ದರ ನಿಗದಿ ಮಾಡಿಲ್ಲ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಲಸಿಕೆ ಖರೀದಿಸಲಾಗಿದೆ. ಲಸಿಕೆ ಖರೀದಿಗೆ ಒಟ್ಟು 231 ಕೋಟಿ ರೂ. ಖರ್ಚು ಮಾಡಲಾಗಿದೆ. ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಕೋವಿಶೀಲ್ಡ್ ಲಸಿಕೆಯ ವೈಲ್ ಪೂರೈಕೆಯಾಗಲಿದೆ' ಎಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.