ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈರಮುಡಿ ಉತ್ಸವ ಮಾರ್ಚ್‌ 24ರಂದು

Last Updated 11 ಫೆಬ್ರುವರಿ 2021, 13:26 IST
ಅಕ್ಷರ ಗಾತ್ರ

ಮಂಡ್ಯ: ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವಿಶ್ವವಿಖ್ಯಾತ ವೈರಮುಡಿ ಉತ್ಸವ ಮಾರ್ಚ್‌ 24ರಂದು ನಡೆಯಲಿದ್ದು ಸಿದ್ಧತೆಗಳು ಆರಂಭಗೊಂಡಿವೆ.

ಕಳೆದ ವರ್ಷ ಕೋವಿಡ್‌ ಲಾಕ್‌ಡೌನ್‌ ಜಾರಿಯಲ್ಲಿದ್ದ ಕಾರಣ ವೈರಮುಡಿ ಉತ್ಸವ ಸರಳವಾಗಿ ನಡೆದಿತ್ತು. ದೇವಾಲಯದ ಒಳಗೆ ಸ್ಥಾನೀಕರು ಸಾಂಕೇತಿಕವಾಗಿ ಉತ್ಸವ ಆಚರಿಸಿದ್ದರು. ಆದರೆ ಈ ಬಾರಿ ವೈಭವಯುತವಾಗಿ ಉತ್ಸವ ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಜಿಲ್ಲಾ ಖಜಾನೆಯಲ್ಲಿರುವ ವಜ್ರಖಚಿತ ತಿರುವಾಭರಣಗಳ ಪೆಟ್ಟಿಗೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಂಜೆ ಚೆಲುವನಾರಾಯಣಸ್ವಾಮಿಯ ಮುಡಿಗೇರಿಸಲಾಗುತ್ತದೆ. ರಾತ್ರಿಯಿಡೀ ದೇವಾಲಯದ ಸುತ್ತಲೂ ಮೆರವಣಿಗೆ ನಡೆಸಲಾಗುತ್ತದೆ.

‘ಧಾರ್ಮಿಕ ಕಾರ್ಯಕ್ರಮಗಳು ಮಾರ್ಚ್ 19ರಂದೇ ಆರಂಭಗೊಳ್ಳುತ್ತವೆ. ಮಾರ್ಚ್‌ 24ರಂದು ವೈರಮುಡಿ ಧಾರಣೆ, ಮಾರ್ಚ್‌ 31ರಂದು ಬ್ರಹ್ಮೋತ್ಸವ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT