ಬೆಂಗಳೂರು: ಬೆಂಗಳೂರು–ಮುಂಬೈ, ಬೆಂಗಳೂರು- ಹೈದರಾಬಾದ್ ಮಧ್ಯೆ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭವಾಗಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ ‘ಕಾಯಕ ಯೋಗಿ’ ಮತ್ತು ‘ನೆಮ್ಮದಿಯ ನೆಲೆ, ಅಭಿವೃದ್ಧಿಯ ಬಲೆ’ ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈಗಾಗಲೇ ರೈಲ್ವೆ ಸಚಿವರು ಮತ್ತು ಕಾರ್ಯದರ್ಶಿಗೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ರೈಲು ಸಂಚಾರ ಆರಂಭವಾದರೆ ರಾಜ್ಯದ ಜನರಿಗೆ ಅನುಕೂಲವಾಗಲಿದೆ ಎಂದರು.
ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳು ಶೀಘ್ರ ಕಾರ್ಯಾರಂಭ ಮಾಡಲಿವೆ. ಇಂಡಿಗೋ ವಿಮಾನ ಸಂಸ್ಥೆ ಜತೆ ಒಪ್ಪಂದ ಮಾಡಿ
ಕೊಂಡಿದ್ದು, ಶಿವಮೊಗ್ಗ–ಬೆಂಗಳೂರು ಮಧ್ಯೆ ಹಾರಾಟ ಆರಂಭವಾಗಲಿದೆ. ಮೈಸೂರು ವಿಮಾನ ನಿಲ್ದಾಣದಿಂದ ಬೋಯಿಂಗ್ ವಿಮಾನ ಕಾರ್ಯಾರಂಭ ಮಾಡಲಿದೆ. ಧರ್ಮಸ್ಥಳದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ವಿವರ ನೀಡಿದರು.
ಮುಂದಿನ ಎರಡು ತಿಂಗಳಲ್ಲಿ ಒಂದು ಲಕ್ಷ ಮನೆಗಳನ್ನು ಜನರಿಗೆ ಒದಗಿಸಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜೀವ್ ಗಾಂಧಿ ವಸತಿ ನಿಗಮದಡಿ ಐದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ಜನರಿಗೆ ಮಂಜೂರು ಮಾಡಿದೆ. ಮೂರೂವರೆ ಲಕ್ಷ ಮನೆಗಳನ್ನು ವಿತರಿಸಲಾಗಿದೆ. ಒಂದು ಲಕ್ಷ ಮನೆಗಳ ನಿರ್ಮಾಣ ಕಾರ್ಯವಿವಿಧ ಹಂತದಲ್ಲಿವೆ. ಎರಡು ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ ಕಾರ್ಯಕ್ಕೆ ಒಪ್ಪಿಗೆ ನೀಡಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಆರು ಸಾವಿರ ಎಕರೆಯಲ್ಲಿ ನಿವೇಶನಗಳನ್ನು ನಿರ್ಮಿಸಿ ವಿತರಿಸಲಾಗಿದೆ. ಮೂರು ಲಕ್ಷಕ್ಕೂ ಹೆಚ್ಚು ಜನರಿಗೆ ಆಸ್ತಿ ಹಂಚಿಕೆ ಪತ್ರ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 100ಕ್ಕೂ ಹೆಚ್ಚು ಉದ್ಯಾನ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.