ಶುಕ್ರವಾರ, ಸೆಪ್ಟೆಂಬರ್ 30, 2022
27 °C

ವಾಣಿ ವಿಲಾಸ ಸಾಗರ ಸುರಕ್ಷಿತ: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಾಣಿ ವಿಲಾಸ (ವಿವಿ) ಸಾಗರ ಜಲಾಶಯದ ಸುರಕ್ಷತೆ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳಸ್ಪಷ್ಟಪಡಿಸಿದ್ದಾರೆ.

‘ವಾಣಿವಿಲಾಸ ಸಾಗರ ಜಲಾಶಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಜ್ಞರ ಸಮಿತಿ ಗುರುವಾರ (ಸೆ.8) ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದೆ. ಅಲ್ಲದೆ, ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲ. ಸುರಕ್ಷತೆಗೂ ತೊಂದರೆ ಇಲ್ಲವೆಂದು ವರದಿ ನೀಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ. ಪ್ರಸ್ತುತ ನೀರಿನ ಸಂಗ್ರಹ 135 ಅಡಿ ಇರುವುದಾಗಿ ಅಣೆಕಟ್ಟೆಗೆ ಭೇಟಿ ನೀಡಿರುವ ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಎಂಜಿನಿಯರ್ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಯಾವುದೇ ಆತಂಕಕ್ಕೆ ಕಾರಣವಿಲ್ಲ’ ಎಂದೂ ಅವರು ವಿವರಿಸಿದ್ದಾರೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು