ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸಂತ ಅಸ್ನೋಟಿಕರ್ ಹತ್ಯೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Last Updated 21 ಏಪ್ರಿಲ್ 2021, 20:16 IST
ಅಕ್ಷರ ಗಾತ್ರ

ಶಿರಸಿ: ಕಾರವಾರ- ಜೋಯಿಡಾ ಶಾಸಕ ರಾಗಿದ್ದ ವಸಂತ ಅಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಮುಂಬೈ ಮೂಲದ ಶಾರ್ಪ್ ಶೂಟರ್ ಸಂಜಯ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ ₹68 ಸಾವಿರ ದಂಡ ವಿಧಿಸಿ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.

2000ರ ಫೆ.19 ರಂದು ಕಾರವಾರ ನಗರದ ದೈವಜ್ಞ ಭವನದ ಎದುರು ಅವರ ಹತ್ಯೆ ನಡೆದಿತ್ತು. ಇನ್ನಿತರ ಆರೋಪಿಗಳಾಗಿದ್ದ ದಿಲೀಪ ನಾಯ್ಕ 2004ರಲ್ಲಿ ಹತ್ಯೆ ಆಗಿದ್ದರು. ಉಳಿದ ಆರೋಪಿಗಳಾದ ಬಾಬು, ಅಂತೋನಿಯನ್ನು ಮುಂಬೈ ಪೊಲೀಸರು ಎನ್‌ಕೌಂಟರ್ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅಪರಾಧ ತನಿಖಾ ವಿಭಾಗ (ಸಿಐಡಿ) ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.

ನ್ಯಾಯಾಧೀಶ ಶಾಂತವೀರ ಶಿವಪ್ಪ ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT