ಮಂಗಳವಾರ, ಮಾರ್ಚ್ 28, 2023
33 °C

ಬಿಎಸ್‌ವೈಗೆ ವೀರಭದ್ರೇಶ್ವರ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ವೀರಶೈವ ಲಿಂಗಾಯತ ಸಂಘಟನೆಯು ಇದೇ 14ರಂದು ಸಂಜೆ 6ಕ್ಕೆ ಬೆಂಗಳೂರಿನ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಹಮ್ಮಿಕೊಂಡಿರುವ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್. ಯಡಿಯೂರಪ್ಪ ಅವರಿಗೆ ‘ವೀರಭದ್ರೇಶ್ವರ ಪ್ರಶಸ್ತಿ’ ಪ್ರದಾನ ಮಾಡಲಾಗುವುದು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

‘ಇದು ಮೊದಲ ಪ್ರಶಸ್ತಿಯಾಗಿದ್ದು, ಶ್ರೀಮಠದಿಂದ ನೀಡಲಾಗುತ್ತಿದೆ. ₹ 50 ಸಾವಿರ ಮೌಲ್ಯದ ವಸ್ತುವನ್ನು ಕಾಣಿಕೆಯಾಗಿ ನೀಡಲಾಗುವುದು. ತಮ್ಮ ಮನೆ ದೇವರು ವೀರಭದ್ರೇಶ್ವರ ಆಗಿರುವುದರಿಂದ ಅವರು ಪ್ರಶಸ್ತಿ ಸ್ವೀಕರಿಸಲು ಒಪ್ಪಿದ್ದಾರೆ. ಮಠ–ಮಾನ್ಯಗಳ ವಿಚಾರದಲ್ಲಿ ಸಹಾಯಕ್ಕೆ ಮುಂಚೂಣಿಯಲ್ಲಿ ಇರುವುದರಿಂದಾಗಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು