ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಭೂತಿ, ಇಷ್ಟಲಿಂಗ ತಯಾರಿಕೆಗೆ ನೆರವು: ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ

Last Updated 15 ಜುಲೈ 2021, 2:42 IST
ಅಕ್ಷರ ಗಾತ್ರ

ಬೆಂಗಳೂರು: ವಿಭೂತಿ ಮತ್ತು ಇಷ್ಟಲಿಂಗ ತಯಾರಿಕಾ ಘಟಕಗಳನ್ನು ಸ್ಥಾಪಿಸುವವರಿಗೆ ಸಾಲ ಹಾಗೂ ಸಹಾಯಧನ ನೀಡುವ ಯೋಜನೆಗಳಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಒಪ್ಪಿಗೆ ನೀಡಿದೆ.

ಮಂಡಳಿಯ ಅಧ್ಯಕ್ಷ ಬಿ.ಎಸ್‌. ಪರಮಶಿವಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ. ಕೃಷಿ, ಶೈಕ್ಷಣಿಕ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವೀರಶೈವ ಲಿಂಗಾಯತ ಸಮುದಾಯದ ಜನರಿಗೆ ನೆರವು ನೀಡುವ ಹಲವು ಕಾರ್ಯಕ್ರಮಗಳಿಗೂ ಮಂಡಳಿ ಒಪ್ಪಿಗೆ ನೀಡಿದೆ.

ಇತರ ನಿಗಮಗಳಲ್ಲಿರುವ ‘ಗಂಗಾ ಕಲ್ಯಾಣ ಯೋಜನೆ’ ಮಾದರಿಯಲ್ಲಿ ‘ಜೀವಜಲ ಯೋಜನೆ’, ಶೈಕ್ಷಣಿಕ ಸಾಲ, ಉನ್ನತ ಶಿಕ್ಷಣ ಪಡೆಯಲು ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ₹ 20 ಲಕ್ಷದವರೆಗೆ ಸಾಲ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಕೃಷಿ ಮತ್ತು ಹೈನುಗಾರಿಕೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷ ₹ 220 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ ಮಂಡಳಿಯ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇನ್ನಷ್ಟು ಹೊಸ ಯೋಜನೆಗಳಿಗೆ ಮುಂದಿನ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ.

ಮಂಡಳಿಯ ನಿರ್ದೇಶಕರಾದ ವೀರಣ್ಣ ಚರಂತಿಮಠ, ಅರವಿಂದ ಬೆಲ್ಲದ, ಲಿಂಗಮೂರ್ತಿ ಹೊಸದುರ್ಗ, ಮಹಾಂತೇಶ್ ಎಂ. ಪಾಟೀಲ್‌, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಆಯುಕ್ತ ವಸಂತ್‌ ಕುಮಾರ್, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಕುಮಾರ್, ಕಂಪನಿ ಕಾರ್ಯದರ್ಶಿ ಧಿರೇನ್ ಕುಮಾರ್, ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಡಿ.ಎಸ್‌. ಸುದರ್ಶನ್‌ ಕುಮಾರ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT