ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೈಜ್ಞಾನಿಕವಾಗಿಲ್ಲ ಎಂದು ಆಕ್ಷೇಪಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದೆ.

‘ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆದಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಗುಳೆ ಹೋದವರನ್ನು ಸಮೀಕ್ಷೆಯಲ್ಲಿ ಪರಿಗಣಿಸಿಲ್ಲ. ವೀರಶೈವ– ಲಿಂಗಾಯತರಲ್ಲೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಈಗ ಮಾಡಿರುವ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡರೆ ಸಮುದಾಯದ ಲಕ್ಷಾಂತರ ಮಂದಿಗೆ ಅನ್ಯಾಯವಾಗುತ್ತದೆ’ ಎಂದು ಮಹಾಸಭಾದ ಉಪಾಧ್ಯಕ್ಷ ಬಿ.ಎಸ್‌. ಸಚ್ಚಿದಾನಂದಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳನ್ನು ಗುರುತಿಸುವ ಗಣತಿಗೆ ಮಹಾಸಭಾದ ವಿರೋಧವಿಲ್ಲ. ಈ ಸಮೀಕ್ಷೆಯ ಅಂಕಿಅಂಶಗಳನ್ನು ವ್ಯವಸ್ಥಿತವಾಗಿ ಸೋರಿಕೆ ಮಾಡಲಾಗಿದೆ. ಕೇವಲ ಜಾತಿವಾರು ಜನಸಂಖ್ಯೆಯನ್ನು ಸೋರಿಕೆ ಮಾಡಿ ಗೊಂದಲ ಮೂಡಿಸಲಾಗಿದೆ. ಗಣತಿದಾರರು ವೀರಶೈವ– ಲಿಂಗಾಯತ ಸಮುದಾಯದ ಶೇಕಡ 50ರಷ್ಟು ಮನೆಗಳಿಗೆ ಭೇಟಿನೀಡಿಲ್ಲ. ವರದಿಯ ಹಲವು ಲೋಪಗಳಿಂದ ಕೂಡಿದೆ ಎಂಬ ಅನುಮಾನವಿದೆ ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕು. ರಾಷ್ಟ್ರೀಯ ಮಟ್ಟದಲ್ಲೂ ಜಾತಿ ಗಣತಿ ನಡೆಸುವ ಚರ್ಚೆ ನಡೆಯುತ್ತಿದೆ. ಅಲ್ಲಿನ ಬೆಳವಣಿಗೆಯನ್ನು ನೋಡಿಕೊಂಡು ರಾಜ್ಯ ಸರ್ಕಾರ ಮುನ್ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು